ರಸ್ತೆ ಮಧ್ಯೆ ಹೊತ್ತಿ ಉರಿದ ಕೇರಳ ಬಸ್‌ – ತಪ್ಪಿದ ದುರಂತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಜ್ಞಾನ ಭಾರತಿ ಮೆಟ್ರೋ ನಿಲ್ದಾಣ ಬಳಿ ರಸ್ತೆ ಮಧ್ಯೆಯೇ ಕೇರಳ ಸರ್ಕಾರಿ ಬಸ್ಸೊಂದು ಹೊತ್ತಿ ಉರಿದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಇಂದು ಸಂಜೆ 6 ಗಂಟೆ ಸುಮಾರಿಗೆ ಮೈಸೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಕೇರಳ ಸಾರಿಗೆ ಬಸ್, ಮೈಸೂರು ರಸ್ತೆಯ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಬಸ್ ಇಂಜಿನ್ ಭಾಗದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ ತಕ್ಷಣ ಬಸ್ ನಿಲ್ಲಿಸಿ ಎಚ್ಚರಿಕೆಯ ಕ್ರಮ ಕೈಗೊಂಡಿದ್ದಾರೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದವರನ್ನು ಕೂಡಲೇ ಕೆಳಗಿಳಿಸಿದ ಪರಿಣಾಮ ದೊಡ್ಡ ಅನಾಹುತ ತಪ್ಪಿದಂತಾಗಿದೆ.

Related Articles

ಇತ್ತೀಚಿನ ಸುದ್ದಿಗಳು