Monday, July 28, 2025

ಸತ್ಯ | ನ್ಯಾಯ |ಧರ್ಮ

ವಯನಾಡ್ ದುರಂತ: 84ಕ್ಕೆ ಏರಿದ ಸಾವಿನ ಸಂಖ್ಯೆ

ತಿರುವನಂತಪುರಂ: ಕೇರಳದ ವಯನಾಡಿನಲ್ಲಿ ಭೂಕುಸಿತದಿಂದ ವಿನಾಶಕಾರಿ ವಾತಾವರಣ ಉಂಟಾಗಿದೆ. ಈ ಘಟನೆಯಲ್ಲಿ ಸಾವಿನ ಸಂಖ್ಯೆ 84 ಕ್ಕೆ ತಲುಪಿದೆ. 116 ಮಂದಿ ಗಾಯಗೊಂಡಿದ್ದಾರೆ ಎಂದು ಕೇರಳ ಕಂದಾಯ ಸಚಿವರ ಕಚೇರಿ ತಿಳಿಸಿದೆ.

ಗಾಯಾಳುಗಳು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕಂದಾಯ ಸಚಿವರ ಕಚೇರಿ ಬಹಿರಂಗಪಡಿಸಿದೆ. ಇದುವರೆಗೆ 80ಕ್ಕೂ ಹೆಚ್ಚು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಕೇರಳ ಮುಖ್ಯ ಕಾರ್ಯದರ್ಶಿ ವಿ ವೇಣು ತಿಳಿಸಿದ್ದಾರೆ. ಭೂಕುಸಿತದಿಂದಾಗಿ ಮುಂಡಕ್ಕೈ, ಚುರಲ್‌ಮಲಾ, ಅಟ್ಟಮಾಳ, ನೂಲಪೂಜೆ ಗ್ರಾಮಗಳು ಕತ್ತಲಲ್ಲಿ ಮುಳುಗಿವೆ. ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ವಾಹನಗಳು ಹಲವೆಡೆ ಮರಗಳ ಕೊಂಬೆಗಳಲ್ಲಿ ಸಿಲುಕಿಕೊಂಡಿವೆ.

ಅವಶೇಷಗಳಡಿ ನೂರಾರು ಮಂದಿ ಸಿಲುಕಿಕೊಂಡಿದ್ದರು. ಅಲ್ಲಲ್ಲಿ ಪ್ರವಾಹದ ನೀರು ತುಂಬಿಕೊಂಡಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗುಡ್ಡಗಳಿಂದ ಬಿದ್ದಿರುವ ಬೃಹತ್ ಬಂಡೆಗಳು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗುತ್ತಿವೆ. ರಕ್ಷಣಾ ಕಾರ್ಯದಲ್ಲಿ ತೊಡಗಿರುವವರು ಧೈರ್ಯದಿಂದ ಮುಂದೆ ಸಾಗುತ್ತಿದ್ದಾರೆ.

ಸತ್ತವರನ್ನು ಮತ್ತು ಗಾಯಾಳುಗಳನ್ನು ಆಂಬುಲೆನ್ಸ್ ಬಳಸಿ ಸ್ಥಳಾಂತರಿಸಲಾಗುತ್ತಿದೆ.

ಮಾಹಿತಿಗಾಗಿ ದಿನದ 24 ಗಂಟೆಯೂ ಸಹಾಯವಾಣಿ 9497900402, 04712721566 ಸಂಪರ್ಕಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page