Friday, August 22, 2025

ಸತ್ಯ | ನ್ಯಾಯ |ಧರ್ಮ

ಮಲಯಾಳಂ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಕೇರಳ ಯೂತ್ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ

ಪಟ್ಟನಂತಿಟ್ಟ/ಕೊಚ್ಚಿ: ರಾಜಕೀಯ ಪಕ್ಷವೊಂದರ ಯುವ ನಾಯಕರು ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಲಯಾಳಂ ನಟಿ ಮತ್ತು ಮಾಜಿ ಪತ್ರಕರ್ತೆ ರಿನಿ ಆನ್ ಜಾರ್ಜ್ ಮಾಡಿದ ಆರೋಪಗಳು ಕೇರಳ ಕಾಂಗ್ರೆಸ್‌ನಲ್ಲಿ ದೊಡ್ಡ ಸಂಚಲನವನ್ನು ಮೂಡಿಸಿವೆ.

ಆ ನಾಯಕರು ಅನೇಕ ಬಾರಿ ತಮಗೆ ಅಸಭ್ಯ ಸಂದೇಶಗಳನ್ನು ಕಳುಹಿಸಿದ್ದು, ಹೋಟೆಲ್‌ಗೆ ಬರುವಂತೆ ಆಹ್ವಾನಿಸಿದ್ದರು ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಆದರೆ, ಅವರು ಆ ನಾಯಕ ಯಾರು ಎಂಬುದನ್ನು ಬಹಿರಂಗಪಡಿಸಿಲ್ಲ.

ಈ ಆರೋಪಗಳ ಹಿನ್ನೆಲೆಯಲ್ಲಿ, ಪಾಲಕ್ಕಾಡ್ ಕಾಂಗ್ರೆಸ್ ಶಾಸಕ ಹಾಗೂ ಕೇರಳ ಯೂತ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಾಮ್‌ಕೂಟತ್ತಿಲ್ ಅವರನ್ನು ಗುರಿಯಾಗಿಸಿಕೊಂಡು ಬಿಜೆಪಿ ಮತ್ತು ಸಿಪಿಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಬೆಳವಣಿಗೆಗಳ ನಂತರ, ಮಾಮ್‌ಕೂಟತ್ತಿಲ್ ಅವರು ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಗುರುವಾರ ಘೋಷಿಸಿದ್ದಾರೆ. ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page