ಕೇರಳದಲ್ಲಿನ ಹಲವು ಯೋಜನೆಗಳಿಗೆ 1 ಲಕ್ಷ ಕೋಟಿ ಖರ್ಚು: ಪ್ರಧಾನಿ ಮೋದಿ

ಕೇರಳ: ಬಿಜೆಪಿ ಸರ್ಕಾರವು ಕೇರಳದಲ್ಲಿ ಆಧುನಿಕ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಬಹಳಷ್ಟು ಯೋಜನೆಗಳಿಗೆ ಸುಮಾರು 1 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಕೇರಳದ ಕೊಚ್ಚಿನಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ವೈದ್ಯಕೀಯ ಕಾಲೇಜನ್ನು ತೆರೆಯಲು ಶ್ರಮಿಸುತ್ತಿದೆ ಎಂದರು. ಈ ಯೋಜನೆಯು ಕೇರಳ ಯುವಕರಿಗೆ ಹೆಚ್ಚು ಉಪಯುಕ್ತವಾಗುತ್ತದೆ ಎಂದು ಹೇಳಿದರು.

ಇಡೀ ದೇಶದ ಯಾವ ಯಾವ ಭಾಗದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆಯೋ ಅಲ್ಲೆಲ್ಲ ಅಭಿವೃದ್ಧಿಯು ವೇಗದಲ್ಲಿ ಸಾಗುತ್ತಿದೆ. ಇದಕ್ಕೆ ಮೂಲ ಕಾರಣ ಕೇಂದ್ರ ಮತ್ತು ರಾಜ್ಯಗಳಲ್ಲಿರುವ ಡಬಲ್‌ ಇಂಜಿನ್‌ ಸರ್ಕಾರ ಎಂದು ನುಡಿದರು.

Related Articles

ಇತ್ತೀಚಿನ ಸುದ್ದಿಗಳು