ಸಿಟಿ ರವಿ ಅವಾಚ್ಯ ಪದ ಬಳಕೆ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಖಾನಾಪುರ ಸಿಪಿಐ ಅಮಾನತು

ಬಿಜೆಪಿ ನಾಯಕರನ್ನು ಖಾನಾಪುರ ಠಾಣೆಯೊಳಗೆ ಬಿಟ್ಟು, ಠಾಣೆಯೊಳಗೆ ಬಿಜೆಪಿ ನಾಯಕರು ಸಭೆ ನಡೆಸಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಖಾನಪುರ ಪೊಲೀಸ್ ಠಾಣೆಯ ಸಿಪಿಐ ಮಂಜುನಾಥ್ ನಾಯ್ಕ್ ಅವರನ್ನು ಐಜಿಪಿ ವಿಕಾಸ್ ಕುಮಾರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ಎಂಎಲ್ಸಿ ಸಿಟಿ ರವಿಯವರ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿಲುವು ತಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.

ಮಂಜುನಾಥ್ ನಾಯಕ್ ಅಮಾನತುಗೊಂಡಿರುವ ಖಾನಾಪುರ ಸಿಪಿಐ. ಕರ್ತವ್ಯ ಲೋಪ ಆರೋಪದಲ್ಲಿ ಸಿಪಿಐ ಮಂಜುನಾಥ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಬಿಜೆಪಿ ಎಂಎಲ್ ಸಿ ಸಿ.ಟಿ. ರವಿ ಕೇಸ್ ನಲ್ಲಿ ಇದೀಗ ಮೊದಲ ತಲೆದಂಡವಾಗಿದ್ದು, ಖಾನಾಪುರದ ಸಿಪಿಐ ಮಂಜುನಾಥ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು