Wednesday, August 20, 2025

ಸತ್ಯ | ನ್ಯಾಯ |ಧರ್ಮ

ಖರ್ಗೆ ಅವರಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳಿವೆ : ಎಂ.ಬಿ ಪಾಟೀಲ್

ಬೆಂಗಳೂರು : AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಬೆಂಗಳೂರಿಗೆ ಆಗಮಿಸಿದ್ದು, ಈ ಸಲುವಾಗಿ ಹಮ್ಮಿಕೊಂಡಿದ್ದ ಸರ್ವೋದಯ ಸಮಾವೇಶದಲ್ಲಿ ʼಖರ್ಗೆ ಅವರಲ್ಲಿ ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ತತ್ವಗಳನ್ನು ನೋಡಿದ್ದು, ರಾಜ್ಯ ಮಾತ್ರವಲ್ಲ ದೇಶದ ಎಲ್ಲ ಭಾಗದ ಜನ ಅವರಿಗೆ ಗೌರವ ನೀಡುತ್ತಾರೆʼ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಹೇಳಿದರು.

ʼಇಂದು ನಮ್ಮ ರಾಜ್ಯದ ಹಿರಿಯ ನಾಯಕರು, ಐದು ದಶಕಗಳ ಕಾಲ ಶಾಸಕರಾಗಿ ಸಚಿವರಾಗಿ ಸೇವೆ ಸಲ್ಲಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದಾರೆ. ಕಾರ್ಮಿಕ ನಾಯಕರಾಗಿದ್ದ ಅವರು, ಕಾರ್ಮಿಕರ ನೋವು ಅರಿತಿದ್ದರು. ಹೀಗಾಗಿ ಕಾರ್ಮಿಕ ಸಚಿವರಾದ ನಂತರ ಅವರು ಕಾರ್ಮಿಕರ ಏಳಿಗೆಗೆ ಶ್ರಮಿಸಿದ್ದಾರೆ. ದೇಶದಲ್ಲಿ ಇಎಸ್ ಐ ಆಸ್ಪತ್ರೆಯನ್ನು ವೈದ್ಯಕೀಯ ಕಾಲೇಜು ಮಾಡಿದವರು ಖರ್ಗೆ ಅವರು. ಅವರು ಸಚಿವರಾಗಿ ಅಸಾಧ್ಯವನ್ನು ಸಾಧ್ಯ ಮಾಡಿದ್ದಾರೆʼ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್‌ ಸರ್ವೋದಯ ಸಮಾರಂಭದಲ್ಲಿ ಹೆಮ್ಮೆಯಿಂದ ಮಾತನಾಡಿದರು.

ʼಖರ್ಗೆ ಅವರಲ್ಲಿ ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ತತ್ವಗಳನ್ನು ನೋಡಿದ್ದು, ರಾಜ್ಯ ಮಾತ್ರವಲ್ಲ ದೇಶದ ಎಲ್ಲ ಭಾಗದ ಜನ ಅವರಿಗೆ ಗೌರವ ನೀಡುತ್ತಾರೆʼ ಎಂದರು.

ಅವರ 50 ವರ್ಷಗಳ ಅನುಭವ ಪಕ್ಷಕ್ಕೆ ಅಮೂಲ್ಯವಾಗಿದೆ. ಅವರಲ್ಲಿರುವ ಕಾಳಜಿ, ಬದ್ಧತೆ ಹಾಗೂ ಸ್ಪಷ್ಟತೆ ಪಕ್ಷಕ್ಕೆ ಹೊಸ ಶಕ್ತಿ ಸಿಗಲಿದೆ. ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಭ್ರಷ್ಟ ಬಿಜೆಪಿ ಸರ್ಕಾರ ಕಿತ್ತೊಗೆದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಬೇಕು. ನಮ್ಮ ನಾಯಕರ ನೇತೃತ್ವದಲ್ಲಿ 2024ರಲ್ಲಿ ದೇಶದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page