Monday, October 14, 2024

ಸತ್ಯ | ನ್ಯಾಯ |ಧರ್ಮ

BREAKING NEWS : ಬಿಗ್ ಬಾಸ್ ಸರಣಿಯ ನಿರೂಪಣೆಗೆ ಕಿಚ್ಚ ಸುದೀಪ್ ನಿವೃತ್ತಿ ಘೋಷಣೆ

ಬಿಗ್ ಬಾಸ್ ಕನ್ನಡ ಸೀಸನ್ 11 ನನ್ನ ಅಂತಿಮ ಸರಣಿ ಎಂದು ಹೇಳುವ ಮೂಲಕ ಕಿಚ್ಚ ಸುದೀಪ್ ಬಿಗ್ ಬಾಸ್ ಗೆ ನಿವೃತ್ತಿ ಘೋಷಿಸಿದ್ದಾರೆ. 10 ವರ್ಷದ ಸುದೀರ್ಘ ಸರಣಿ ನಡೆಸಿ 11 ನೇ ವರ್ಷಕ್ಕೆ ಕಾಲಿಟ್ಟಿರುವ ಬಿಗ್‌ಬಾಸ್‌ ಕಾರ್ಯಕ್ರಮವನ್ನು ಇಷ್ಟು ವರ್ಷ ಯಶಸ್ವಿಯಾಗಿ ನಡೆಸಿಕೊಟ್ಟ ಸುದೀಪ್ ಈಗ ಏಕಾ ಏಕಿ ಅಧಿಕೃತವಾಗಿ ಗುಡ್ ಬೈ ಹೇಳಿದ್ದಕ್ಕೆ ನಿಖರ ಕಾರಣದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಸಧ್ಯ ನಟ ಕಿಚ್ಚ ಸುದೀಪ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಅಲ್ಲೇ ತಮ್ಮ ನಿವೃತ್ತಿಯ ಘೋಷಣೆ ಮಾಡಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಂತೆ “BBK11 ವರೆಗೂ ನೀವು ತೋರಿದ ಉತ್ತಮ ಪ್ರತಿಕ್ರಿಯೆಗಾಗಿ ಎಲ್ಲರಿಗೂ ಧನ್ಯವಾದಗಳು. ನೀವೆಲ್ಲರೂ ನನಗೆ ಮತ್ತು ಕಾರ್ಯಕ್ರಮಕ್ಕೆ ತೋರಿದ ಪ್ರೀತಿಯ ಬಗ್ಗೆ ಟಿವಿಆರ್ (ಸಂಖ್ಯೆ)ಯಲ್ಲೇ ಕಾಣುತ್ತಿದೆ. ಈ 10 ಪ್ಲಸ್​ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ತೃಪ್ತಿಕರವಾಗಿದೆ. ನಾನು ಈಗ ಬೇರೆ ಕಡೆಗೆ ನನ್ನ ನಡೆಯನ್ನು ಮುಂದುವರಿಸಲು ಇದು ಸಕಾಲವಾಗಿದೆ. ಇದು ಬಿಗ್ ಬಾಸ್ ಕನ್ನಡ ಗೆ ಹೋಸ್ಟ್ ಆಗಿ ನನ್ನ ಕೊನೆಯ ಸೀಸನ್ ಆಗಿರುತ್ತದೆ ಮತ್ತು ನನ್ನ ನಿರ್ಧಾರವನ್ನು ನನ್ನ ಬಣ್ಣಗಳು ಮತ್ತು ಈ ಎಲ್ಲಾ ವರ್ಷಗಳಿಂದ ಬಿಗ್ ಬಾಸ್ ​​ಅನ್ನು ಅನುಸರಿಸಿದ ಎಲ್ಲರೂ ಗೌರವಿಸುತ್ತಾರೆ ಎಂದು ನಾನು ನಿಜವಾಗಿಯೂ ನಂಬುತ್ತೇನೆ. ಈ ಸೀಸನ್ ಅನ್ನು ಅತ್ಯುತ್ತಮವಾಗಿ ಮಾಡೋಣ, ಮತ್ತು ನಾನು ಕೂಡ ಅತ್ಯುತ್ತಮವಾಗಿ ನಿಮ್ಮೆಲ್ಲರನ್ನು ರಂಜಿಸುತ್ತೇನೆ. ಲವ್ ಮತ್ತು ಹಗ್. ಇದಕ್ಕಾಗಿ ಎಲ್ಲರಿಗೂ ಧನ್ಯವಾದಗಳು” ಎಂದು ಟ್ವೀಟ್‌ ನಲ್ಲಿ ಬರೆದುಕೊಂಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page