ಹಾಸನ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಕೊನೆಗೂ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಜಿ ಸಚಿವ ಹೆಚ್.ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದೂರು ಕೊಟ್ಟ ಮೇಲೆ ಎಸ್‌ಐಟಿ ತನಿಖೆ ನಡೆಸುತ್ತಿದೆ.
ಈ ಮಧ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಎಚ್ ಡಿ ರೇವಣ್ಣ ಹಾಗೂ ಸತೀಶ್ ಬಾಬಣ್ಣ ಮೇಲೆ ಸಂತ್ರಸ್ತೆಯನ್ನು ಅಪಹರಿಸಿದ ದೂರು ದಾಖಲಾಗಿದೆ. ಎಪ್ರಿಲ್ 29 ರಂದು ಈ ಕೃತ್ಯ ನಡೆದಿದ್ದು, ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಸೂರಿನ ಕೆಆರ್ ನಗರದ ಹೆಬ್ಬಾಲುವಿನಲ್ಲಿ ಈ ಕೃತ್ಯ ನಡೆದಿದ್ದು, ರಾಜು ಎಂಬವರು ದೂರು ದಾಖಲಿಸಿದ್ದಾರೆ.
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಯನ್ನು ಅಪಹರಿಸಲಾಗಿದೆ. ಈ ಮೂಲಕ ಇಡೀ ಪ್ರಕರಣಕ್ಕೆ ಸಿನಿಮೀಯ ತಿರುವ ಸಿಕ್ಕಿದೆ.
