ಕಿಡ್ನಾಪ್ ಪ್ರಕರಣ: ಭವಾನಿ ರೇವಣ್ಣಗೆ ಮತ್ತೆ ಸಂಕಷ್ಟ

ಮೈಸೂರಿನ ಕೆ.ಆರ್ ನಗರ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್​ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ 9 ಆರೋಪಿಗಳಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ನಿಂದ ಸಮನ್ಸ್ ಜಾರಿ ಮಾಡಲಾಗಿದೆ.

ಪ್ರಕರಣದ ಪ್ರಮುಖ ಆರೋಪಿಗಳಾದ ಹೆಚ್.ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಎಸ್‌ಐಟಿ ಅಧಿಕಾರಿಗಳು, ಸುಪ್ರೀಂಕೋರ್ಟ್‌ಗೆ ಇತ್ತೀಚೆಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ನ ದ್ವಿಸದಸ್ಯ ಪೀಠ ಭವಾನಿ ರೇವಣ್ಣಾಗೆ ನೊಟೀಸ್ ಜಾರಿ ಮಾಡಿದ್ದರು. ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.

ಸಧ್ಯ ಸಂತ್ರಸ್ತ ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ ಸತೀಶ್ ಬಾಬು, ಮನುಗೌಡ, ಕೆ.ಎ.ರಾಜಗೋಪಾಲ್, ಹೆಚ್.ಕೆ.ಸುಜಯ್, ಹೆಚ್.ಎನ್.ಮಧು, ಎಸ್.ಟಿ.ಕೀರ್ತಿ ಮತ್ತು ಅಜಿತ್ ಕುಮಾರ್​​ಗೆ ಐಪಿಸಿ ಸೆಕ್ಷನ್​ 364 A ಕೈಬಿಟ್ಟು ಉಳಿದ ಆರೋಪಗಳಿಗೆ ಸಂಬಂಧಿಸಿದಂತೆ ಸಮನ್ಸ್ ನೀಡಲಾಗಿದೆ.

ಕಿಡ್ನ್ಯಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣ ಕಾರು ಚಾಲಕ ಅಜಿತ್​ನನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆತನ ವಿರುದ್ಧ ಸಂತ್ರಸ್ತೆ ವಿಡಿಯೋ ರೆಕಾರ್ಡ್ ಮಾಡಿ ವೈರಲ್ ಮಾಡಿರುವ ಆರೋಪವಿದೆ. ಭವಾನಿ ಸೂಚನೆ ಮೇರೆಗೆ ಮನೆಯಿಂದ ಕಾರಿನಲ್ಲಿ ಸಂತ್ರಸ್ತೆಯನ್ನು ಕರೆದೊಯ್ದ ಆರೋಪ ಕೂಡ ಇದೆ.

Related Articles

ಇತ್ತೀಚಿನ ಸುದ್ದಿಗಳು