ಪ್ರತಿಷ್ಠಿತ ಏಷ್ಯಾಕಪ್ (Asia cup) ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ. ಮೊದಲೆರಡು ಪಂದ್ಯಗಳಲ್ಲಿ ಕೆಎಲ್ ರಾಹುಲ್ ಅನುಪಸ್ಥಿತಿಯೇ ಈ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ.
ಕೆಎಲ್ ರಾಹುಲ್ ತಂಡದ ಪ್ರಮುಖ ವಿಕೆಟ್ ಕೀಪರ್ ಮತ್ತು ಮಧ್ಯಮ ಕ್ರಮಾಂಕದ ಆಟಗಾರ ಕೂಡ. ಆದರೆ 17 ಸದಸ್ಯರ ಭಾರತ ತಂಡದಲ್ಲಿ ಇಶಾನ್ ಕಿಶನ್ ರಾಹುಲ್ ಅವರ ಪರ್ಯಾಯ ವಿಕೆಟ್-ಕೀಪರ್ ಆಗಿದ್ದರೂ, ಈ ಯುವ ಆಟಗಾರ ಆರಂಭಿಕರಾಗಿದ್ದಾರೆ. ಇದು ಈಗ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಇಶಾನ್ ಕಿಶನ್ ಆರಂಭಿಕರಾಗಿ ರೋಹಿತ್ ಶರ್ಮಾ ಅವರನ್ನು ಸೇರಿಕೊಂಡರೆ, ಶುಭಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಮತ್ತು ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕಾಗುತ್ತದೆ.
ಮೂರನೇ ಕ್ರಮಾಂಕದಲ್ಲಿ ಶುಭಮನ್ ಗಿಲ್ ಬ್ಯಾಟ್ ಮಾಡಿದರೆ, ಟೀಂ ಇಂಡಿಯಾ ಕೊಹ್ಲಿ ರನ್‌ಗಳನ್ನು ಮಿಸ್ ಮಾಡಿಕೊಳ್ಳಬೇಕಾಗುತ್ತದೆ. ಏಕೆಂದರೆ ಕೊಹ್ಲಿ ಯಾವುದೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದರೂ ಸಹ. ಅಂದರೆ ಮೂರನೇ ಕ್ರಮಾಂಕದಲ್ಲಿ ಗಿಲ್‌ಗಿಂತ ಕೊಹ್ಲಿ ಅತ್ಯುತ್ತಮ ಆಯ್ಕೆಯಾಗಿದ್ದಾರೆ, ಆದರೆ ಕೆಎಲ್ ರಾಹುಲ್ ಗಾಯದಿಂದಾಗಿ ಭಾರತ ತಂಡವು ಬ್ಯಾಟಿಂಗ್ ಕ್ರಮಾಂಕದಲ್ಲಿ ಅನಿರೀಕ್ಷಿತ ಬದಲಾವಣೆಗಳನ್ನು ಮಾಡಬೇಕಾಗಿದೆ. ಇದರ ಹೊರತಾಗಿ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಮತ್ತು ಗಿಲ್ ನಾಲ್ಕನೇ ಕ್ರಮಾಂಕದಲ್ಲಿ ಆಡಿದರೆ ಯಾವುದೇ ನಷ್ಟವಾಗದಿರಬಹುದು.
ಏತನ್ಮಧ್ಯೆ, ಬಾರ್ಡರ್ ಗವಾಸ್ಕರ್ ಟೆಸ್ಟ್ ಟ್ರೋಫಿಯ ವೇಳೆ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ ಅವರು ಪುನರಾಗಮನಕ್ಕೆ ಸಿದ್ಧರಾಗಿದ್ದಾರೆ. ಪಾಕಿಸ್ತಾನ ವಿರುದ್ಧದ ಮೊದಲ ಪಂದ್ಯದಲ್ಲಿ ಆಡುವ ಸಾಧ್ಯತೆ ಇದ್ದರೂ, ಯಾವ ಸ್ಥಾನದಲ್ಲಿ ಆಡಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ನಾಳೆ ಏಷ್ಯಾಕಪ್ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ನೇಪಾಳ ತಂಡಗಳು ಮುಖಾಮುಖಿಯಾಗಲಿವೆ. ಭಾರತ ತಂಡವು ಸೆಪ್ಟೆಂಬರ್ 2ರಂದು ಪಾಕಿಸ್ತಾನ ಮತ್ತು ಸೆಪ್ಟೆಂಬರ್ 4ರಂದು ನೇಪಾಳವನ್ನು ಎದುರಿಸಲಿದೆ. ಪಂದ್ಯಾವಳಿಯ ಫೈನಲ್ ಸೆಪ್ಟೆಂಬರ್ 27ರಂದು ನಡೆಯಲಿದೆ.
ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI..
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭಂ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.
ಏಷ್ಯಾಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಂ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪರ್ದೀಶ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).