ಸಚಿವ ಸ್ಥಾನಕ್ಕೆ ಕೆಎನ್ ರಾಜಣ್ಣ ರಾಜೀನಾಮೆ

ಸಹಕಾರ ಸಚಿವ ಕೆ ಎನ್ ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಮತ್ತು ರಾಹುಲ್ ಗಾಂಧಿಯವರ ವಿರುದ್ಧ ಪರೋಕ್ಷವಾಗಿ ಮಾತನಾಡಿದ ಹಿನ್ನೆಲೆಯಲ್ಲಿ ನೇರ ಹೈಕಮಾಂಡ್ ಅವರ ರಾಜೀನಾಮೆಗೆ ಒತ್ತಾಯಿಸಿದೆ ಎನ್ನಲಾಗಿದೆ.

ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಚಿವ ಕೆಎನ್​ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜೀನಾಮೆ ಬಗ್ಗೆ ಸಚಿವ ಕೆಎನ್​ ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಬಳಿಕ ಸ್ಪಷ್ಟನೆ ನೀಡುತ್ತೇನೆ. ಯಾವ ವಿಚಾರಕ್ಕೆ ಹೈಕಮಾಂಡ್​ ನನ್ನ ಮೇಲೆ ಗರಂ ಆಗಿದೆ ಎಂಬುದು ಗೊತ್ತಿಲ್ಲ ಎಂದು ರಾಜಣ್ಣ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಇದ್ದಾರೆ, ಅಲ್ಲೇ ಭೇಟಿಯಾಗುವೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಂತರ ಮಾತನಾಡುತ್ತೇನೆ. ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನು ಅಲ್ಲ. ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದರು.

Related Articles

ಇತ್ತೀಚಿನ ಸುದ್ದಿಗಳು