Home ಅಪರಾಧ ಕೊಪ್ಪಳ ಅ*ತ್ಯಾಚಾರವೆಸಗಿ ಮಹಿಳೆಯ ಶವ ಸುಟ್ಟು – ಪೈಶಾಚಿಕ ಕೃತ್ಯ

ಕೊಪ್ಪಳ ಅ*ತ್ಯಾಚಾರವೆಸಗಿ ಮಹಿಳೆಯ ಶವ ಸುಟ್ಟು – ಪೈಶಾಚಿಕ ಕೃತ್ಯ

ಕನಕಗಿರಿ : ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ( Harassment ) ಮಿತಿಮೀರುತ್ತಿರುವುದಕ್ಕೆ ಸಾಕ್ಷಿ ಎಂಬಂತೆ ಕೊಪ್ಪಳ (Koppal ) ಜಿಲ್ಲೆಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ (Shocking incident ) ಬೆಳಕಿಗೆ ಬಂದಿದೆ.

ಕನಕಗಿರಿ ಪಟ್ಟಣದ ಐದನೇ ವಾರ್ಡ್‌ನಲ್ಲಿ ಮಹಿಳೆಯೊಬ್ಬರ ಶವ ಸಂಪೂರ್ಣವಾಗಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಡೀ ಜಿಲ್ಲೆಯನ್ನು ನಡುಗಿಸಿದೆ. ಕಾಮುಕರು ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಕ್ರೂರವಾಗಿ ಕೊಲೆ ಮಾಡಿದ ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಶವಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳೀಯ ನಿವಾಸಿ ಸಂಗಪ್ಪ ಎಂಬುವವರಿಗೆ ಸೇರಿದ ಕಟ್ಟಡದ ಮೂರನೇ ಮಹಡಿಯಲ್ಲಿ ಈ ಸುಟ್ಟ ಮೃತದೇಹ ಪತ್ತೆಯಾಗಿದೆ. ಅಪರಿಚಿತ ಮಹಿಳೆಯ ಶವ ಇದಾಗಿದ್ದು, ಮೃತದೇಹವು ಗುರುತು ಸಿಗದಷ್ಟು ಬೆಂದು ಹೋಗಿದೆ. ದುಷ್ಕರ್ಮಿಗಳು ಜನರಿಲ್ಲದ ಸಮಯ ಸಾಧಿಸಿ ಕಟ್ಟಡದ ಮೇಲ್ಭಾಗಕ್ಕೆ ಮಹಿಳೆಯನ್ನು ಕರೆತಂದು ಅಥವಾ ಅಪಹರಿಸಿ ಈ ಕೃತ್ಯ ಎಸಗಿರಬಹುದು ಎನ್ನಲಾಗಿದೆ. ಶವ ಪತ್ತೆಯಾದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಆತಂಕ ಹಾಗೂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಘಟನಾ ಸ್ಥಳದಲ್ಲಿ ಜನ ಜಮಾಯಿಸಿದ್ದರು.

ವಿಷಯ ತಿಳಿಯುತ್ತಿದ್ದಂತೆ ಕನಕಗಿರಿ ಠಾಣೆಯ ಪೊಲೀಸರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪ್ರಾಥಮಿಕ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಮಹಿಳೆಯ ಗುರುತು ಪತ್ತೆ ಹಚ್ಚುವುದು ಪೊಲೀಸರಿಗೆ ದೊಡ್ಡ ಸವಾಲಾಗಿದ್ದು, ಈ ಭೀಕರ ಕೊಲೆಗೆ ನಿಖರ ಕಾರಣವೇನು ಮತ್ತು ಇದರ ಹಿಂದೆ ಯಾರ ಕೈವಾಡವಿದೆ ಎಂಬ ಬಗ್ಗೆ ತೀವ್ರ ತನಿಖೆ ಕೈಗೊಂಡಿದ್ದಾರೆ.

You cannot copy content of this page

Exit mobile version