Home ರಾಜ್ಯ ಧಾರವಾಡ ಆರ್‌ಎಸ್‌ಎಸ್ ನಿಷೇಧಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಆರ್‌ಎಸ್‌ಎಸ್ ನಿಷೇಧಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

0

ಹುಬ್ಬಳ್ಳಿ: ದೇಶದಲ್ಲಿ ಆರ್‌ಎಸ್‌ಎಸ್ (RSS) ಸಂಘಟನೆಯನ್ನು ಕಾಂಗ್ರೆಸ್ ಈಗಾಗಲೇ ಮೂರು ಬಾರಿ ನಿಷೇಧಿಸಿದೆ ಮತ್ತು ಅದನ್ನು ಸಂಪೂರ್ಣವಾಗಿ ನಿಷೇಧಿಸುವವರೆಗಿನ ನಮ್ಮ ಹೋರಾಟವು ನಿರಂತರವಾಗಿ ಮುಂದುವರಿಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಗುರುವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ವಿರುದ್ಧ ಧ್ವನಿ ಎತ್ತಿದ ಬೆನ್ನಲ್ಲೇ, ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ನಾಯಕರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಭೂಹಗರಣದ ಸುಳ್ಳು ಆರೋಪ ಹೊರಿಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಮೇಲಿನ ಈ ಆರೋಪಗಳು ಸತ್ಯಕ್ಕೆ ಮೈಲುಗಳಷ್ಟು ದೂರವಾಗಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಬೆಂಗಳೂರಿನ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಭೂಮಿ ಸ್ವಾಧೀನಪಡಿಸಿಕೊಂಡಿರುವುದರಲ್ಲಿ ಭಾರಿ ಹಗರಣ ನಡೆದಿದೆ ಎಂದು ಆರೋಪಿಸಿದ ಹರಿಪ್ರಸಾದ್, ಅಂದಿನ ಬಿಜೆಪಿ ಸರ್ಕಾರವು ಈ ವಿಶ್ವವಿದ್ಯಾಲಯಕ್ಕಾಗಿ ರೈತರಿಂದ ಪ್ರತಿ ಎಕರೆಗೆ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಒಟ್ಟು 106 ಎಕರೆ ಭೂಮಿಯನ್ನು ಖರೀದಿಸಿತ್ತು ಎಂದು ದೂರಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಕಾಂಗ್ರೆಸ್ ವಿರೋಧಿಸುವುದಿಲ್ಲ, ಆದರೆ ಯಾವುದೇ ಒಬ್ಬ ಅರ್ಹ ಮತ್ತು ನೈಜ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂಬುದು ನಮ್ಮ ಪಕ್ಷದ ದೃಢವಾದ ನಿಲುಡಾಗಿದೆ ಎಂದು ಹರಿಪ್ರಸಾದ್ ತಿಳಿಸಿದ್ದಾರೆ.

You cannot copy content of this page

Exit mobile version