ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿ ಒಟ್ಟು 9 ಮಂದಿ ಮುಖ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸದ್ಯಕ್ಕೆ ಎರೆಡು ಕೇಂದ್ರಗಳ ಅಕ್ರಮ ನೆಡೆದಿರುವುದು ಬೆಳಕಿಗೆ ಬಂದಿದೆ, ಅಕ್ರಮಕ್ಕೆ ಸಂಬಂಧಿಸಿದ ಉಪ ಪ್ರಾಂಶುಪಾಲ ಮತ್ತು ಅವರ ಪುತ್ರ ಸೇರಿದಂತೆ ನಾಲ್ವರು ತಲೆಮರೆಸಿಕೊಂಡಿದ್ದು, ಹುಡುಕಾಟ ನಡೆಯುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಅಕ್ರಮದ ಬಗ್ಗೆ ವಿವರ ನೀಡಿದ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ, ‘ಗೋಕಾಕ ನಗರದ ಜೆಎಸ್‌ಎಸ್ ಪದವಿಪೂರ್ವ ಕಾಲೇಜು ಹಾಗೂ ಗದಗ ನಗರದ ಮುನ್ಸಿಪಲ್ ಕಾಲೇಜಿನಲ್ಲಿ ನಡೆದ ಅಕ್ರಮಗಳು ಖಚಿತಪಟ್ಟಿವೆ. ಅಥಣಿ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಅಕ್ರಮ ನಡೆದಿರುವುದಾಗಿ ಅನುಮಾನವಿದೆ ಎಂದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಲುಬುರಗಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಕೆಪಿಟಿಸಿಎಲ್ ನೇಮಕಾತಿಯಲ್ಲಿ ಅಕ್ರಮ ನಡೆದಿಲ್ಲ ಎಂದು ಹೇಳಿದ್ದಾರೆ. ಇಂಧನ ಸಚಿವ ವಿ.ಸುನೀಲ್ ಕುಮಾರ್ ಮಾತನಾಡಿ ನೇಮಕಾತಿ ಪ್ರಕ್ರಿಯೆ ಇಲಾಖೆಯಿಂದ ನಡೆದರೂ, ಪರಿಕ್ಷೇ ಆಯೋಜಿಸಿದ್ದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ. ಪ್ರಾಥಮಿಕ ತನಿಖೆಯಲ್ಲಿ ಅಕ್ರಮ ನಡೆದಿಲ್ಲ ಎಂಬುದು ಗೊತ್ತಾಗಿದೆ. ಅಭ್ಯರ್ಥಿಗಳು ಭಯಪಡಬೇಕಿಲ್ಲ, ಒಂದು ವೇಳೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದರೆ, ಯಾವುದೇ ಕಾರಣಕ್ಕೂ ಅದನ್ನು ಸಹಿಸುವುದಿಲ್ಲ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.