KSRTC ನೇಮಕಾತಿಗೆ ಮರು ಚಾಲನೆ – 2 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಇಂದು (ಜೂ.17) ಚಾಲಕ ಕಂ ನಿರ್ವಾಹಕರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಇಂದು ಇಲಾಖೆಯ ವತಿಯಿಂದ ನೇಮಕಾತಿ ಪತ್ರಗಳನ್ನು ವಿತರಣೆ ಮಾಡಿದೆ.ಒಟ್ಟು 2000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ ಮಾಡಲಾಗಿದೆ.

ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಇಂದು ಬೆಂಗಳೂರಿನ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಸಾಂಕೇತಿಕವಾಗಿ ಮೊದಲ 51 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಣೆ ಮಾಡಿ ಶುಭ ಕೋರಿದರು.ಆ ಬಳಿಕ ಮಾತನಾಡಿದ ಅವರು ಚಾಲನಾ ಸಿಬ್ಬಂದಿಯ ನೇಮಕಾತಿಯನ್ನು ಸಂಪೂರ್ಣ ಪಾರದರ್ಶಕವಾಗಿ ಮಾಡಲಾಗಿದೆ ಎಂದರು.

ಈ ನೇಮಕಾತಿ ಸುಮಾರು 8 ವರ್ಷಗಳ ನಂತರ ಕೆಎಸ್​ಆರ್​ಟಿಸಿಯಲ್ಲಿ ಕೈಗೊಂಡ ನೇಮಕಾತಿಯಾಗಿದೆ.ಈ ಬಾರಿ ಕೇವಲ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು