Sunday, October 5, 2025

ಸತ್ಯ | ನ್ಯಾಯ |ಧರ್ಮ

ಕುತೂಹಲ ಹೆಚ್ಚಿಸಿದ ‘ಅಂಬುಜಾʼ ಚಿತ್ರದ ಟೀಸರ್

ಬೆಂಗಳೂರು : ಶುಭಾ ಪೂಂಜಾ, ಅಮೃತವರ್ಷಿಣಿ ಧಾರಾವಾಹಿ ಖ್ಯಾತಿಯ ರಜಿನಿ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ‘ಅಂಬುಜಾ’ಸಿನಿಮಾ ಟೀಸರ್ ಹಾಗೂ ಲಿರಿಕಲ್ ವೀಡಿಯೋ ಬಿಡುಗಡೆಯಾಗಿದ್ದುಎಲ್ಲರ ಗಮನ ಸೆಳೆಯುತ್ತಿದೆ. ನೈಜ ಘಟನೆ ಆಧಾರಿತ ಈ ಚಿತ್ರದ ಟೀಸರ್ ಕುತೂಹಲವನ್ನು ಹುಟ್ಟು ಹಾಕಿದ್ದು, ಪ್ರೇಕ್ಷಕರಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ.

ಕ್ರೈಂ ಥ್ರಿಲ್ಲರ್ ಹಾರಾರ್ ಕಥಾಹಂದರ ಒಳಗೊಂಡ ಈ ಚಿತ್ರವನ್ನು ಕಾಶಿನಾಥ್ ಡಿ ಮಡಿವಾಳರ್ ನಿರ್ಮಾಣ ಮಾಡಿದ್ದು, ಮೊದಲ ಬಾರಿ ಸಿನಿಮಾ ನಿರ್ಮಾಣ ಸಾಹಸಕ್ಕೆ ಕೈ ಹಾಕಿರುವ ಇವರು ಚಿತ್ರಕ್ಕೆ ಕಥೆ, ಸಾಹಿತ್ಯ ಕೂಡ ಬರೆದಿದ್ದಾರೆ. ಶ್ರೀನಿ ಹನುಮಂತರಾಜು  ಚಿತ್ರವನ್ನು ನಿರ್ದೇಶಿಸಿದ್ದು, ಕೆಲವು ದಿನಗಳ ನಂತರ ಸಿನಿಮಾ ಮಾಡಿದ್ದ ಇವರಿಗೆ ಇದು ಎರಡನೇ ಸಿನಿಮಾವಾಗಿದೆ.

ಚಿತ್ರದ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ  ನಟಿ ರಜಿನಿ  ʼಸಿನಿಮಾ ತುಂಬಾ ವಿಶೇಷವಾಗಿದೆ ಹಾಗೆಯೇ ನನ್ನ ಪಾತ್ರ ಕೂಡ ಅಷ್ಟೇ ವಿಶೇಷವಾಗಿದೆ. ಲಂಬಾಣಿ ವೇಷ ಭೂಷಣ ಕಣ್ಣಿಗೆ ಹಬ್ಬ.ಚಿತ್ರೀಕರಣ ಸಮಯದಲ್ಲಿ ಅವರು ನಮ್ಮನ್ನು ಸ್ವೀಕರಿಸಿದ ರೀತಿ ಎಲ್ಲವೂ ತುಂಬಾ ಖುಷಿ ಕೊಟ್ಟಿದೆ. ಲಂಬಾಣಿ ಪಾತ್ರ ಅಂದಾಗ ನನಗೆ ಬಹಳ ಖುಷಿ ಆಯ್ತು. ಮೊದಲ ದಿನ ಲಂಬಾಣಿ ವೇಷ ಹಾಕಿಕೊಂಡಾಗ ತಲೆ ಎಲ್ಲ ತುಂಬಾ ನೋವಾಗುತ್ತಿತ್ತು. ಆಮೇಲೆ ಅಡ್ಜೆಜ್ಟ್ ಆಯ್ತು. ಸಿನಿಮಾದ ಹಾಡು ಕೂಡ ತುಂಬಾ ಚೆನ್ನಾಗಿ ಮೂಡಿ ಬಂದಿದೆʼ ಎಂದು ತಮ್ಮ ಪಾತ್ರ ಹಾಗೂ ಹಾಡಿನ ಬಗ್ಗೆ ಸಂತಸ ಹಂಚಿಕೊಂಡ್ರು.

ಚಿತ್ರದ ನಿರ್ಮಾಪಕ ಕಾಶಿನಾಥ್ ಡಿ ಮಡಿವಾಳರ್ ʼಕಥೆ ಬರೆದಾಗ ಚೆನ್ನಾಗನ್ನಿಸಿತು, ಗೊತ್ತಿಲ್ಲದ ವಿಚಾರಗಳನ್ನು ಜನರಿಗೆ ಹೇಳಬೇಕು ಎನಿಸಿತು. ಅದಾದ ಮೇಲೆ ನಿರ್ದೇಶಕ ಶ್ರೀನಿ ಅವರ ಜೊತೆ ಮಾತನಾಡಿದಾಗ ಅವರು ಕೂಡ ಕಥೆ ತುಂಬಾ ಚೆನ್ನಾಗಿದೆ ಅಂದ್ರು. ಸಿನಿಮಾ ಮಾಡೋಣ ಎಂದು ನಿರ್ಧರಿಸಿದೆ. ಸಿನಿಮಾಗೆ ಬೇಕಾದ ಪಾತ್ರಗಳು ಸಿಗುತ್ತ ಹೋಯಿತು. ಫೈನಲಿ ಒಂದೊಳ್ಳೆ ಸಿನಿಮಾ ರೆಡಿಯಾಗಿದೆ. ಪ್ರೇಕ್ಷಕರು ನೋಡಿ ಹರಸಬೇಕು. ‘ಅಂಬುಜ’ಪಕ್ಕ ಕಮರ್ಶಿಯಲ್ ಸಿನಿಮಾವಾಗಿದ್ರೂ ಕೂಡ ಮನೆಮಂದಿಯೆಲ್ಲ ಕುಳಿತು ನೋಡಬಹುದುʼ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

ʼನಿರ್ದೇಶಕ ಶ್ರೀನಿ ಅವರ ಜೊತೆ ಈ ಹಿಂದೆ ಕೆಲವು ದಿನಗಳ ನಂತರ ಸಿನಿಮಾ ಮಾಡಿದ್ದೆ, ಇದೀಗ ಅವರ ನಿರ್ದೇಶನದಲ್ಲಿ ಕ್ರೈಂ ಥ್ರಿಲ್ಲರ್ ಹಾರಾರ್ ಸಿನಿಮಾ ಅಂಬುಜಾದಲ್ಲಿ ನಟಿಸುತ್ತಿದ್ದೇನೆ. ಚಿತ್ರದಲ್ಲಿ ಕ್ರೈಂ ರಿಪೋರ್ಟರ್ ಪಾತ್ರ ನಿರ್ವಹಿಸಿದ್ದೇನೆ. ಪಾತ್ರ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾ ಕೂಡ ಅಷ್ಟೇ ಚೆನ್ನಾಗಿ ಮೂಡಿ ಬಂದಿದೆ ಎಂದು ಚಿತ್ರದಲ್ಲಿ ಅಭಿನಯಿಸಿದ್ದ ನಟ ತಮ್ಮ ಅಭಿಪ್ರಾಯ ತಿಳಿಸಿದರು.

ಈ ಸಿನೆಮಾ ದಲ್ಲಿ ಶುಭಾ ಪೂಂಜಾ, ಪದ್ಮಜಾ ರಾವ್, ರಜಿನಿ, ಕಾಮಿಡಿ ಕಿಲಾಡಿ ಗೋವಿಂದೇಗೌಡ, ಕಾಮಿಡಿ ಕಿಲಾಡಿ ನಿರ್ದೇಶಕ ಶರಣಯ್ಯ, ಪ್ರಿಯಾಂಕ ಕಾಮತ್, ಸಂದೇಶ್ ಶೆಟ್ಟಿ ಅಜ್ರಿ ಸೇರಿದಂತೆ ಹಲವು ಕಲಾವಿದರು ಚಿತ್ರದ ಭಾಗವಾಗಿದ್ದಾರೆ. ಬೆಂಗಳೂರು, ಗದಗ, ಉಡುಪಿ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಎಸ್ ಕೆ ಸಿನಿಮಾಸ್ ಬ್ಯಾನರ್ ನಡಿ ಸಿನಿಮಾ ನಿರ್ಮಾಣವಾಗಿದ್ದು, ವಿಜಯ್ ಎಂ ಕುಮಾರ್ ಸಂಕಲನ, ಮುರಳೀಧರ್ ಎಂ ಛಾಯಾಗ್ರಹಣ, ಪ್ರಸನ್ನ ಕುಮಾರ್ ಎಂ ಎಸ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

ಇದನ್ನೂ ನೋಡಿ : ನಾವು ಅಲ್ಲಿಗೆ ಹೋದ್ರೆ ಈಗ ಹೊಡೀತಾರೆ: ದಲಿತ ಯುವಕನ ಅಳಲು
ಚಿಕ್ಕಮಗಳೂರು ತಾಲ್ಲೂಕಿನ ಜೇನುಗುಡ್ಡೆಯಲ್ಲಿ ಮಾಲೀಕ ಹಾಗೂ ಬಿಜೆಪಿಯ ಮುಖಂಡ ಜಗದೀಶ್‌ ಗೌಡ ಎಂಬುವವರು 14 ಮಂದಿ ದಲಿತ ಮಹಿಳಾ ಕಾರ್ಮಿಕರನ್ನು ಕೂಡಿ ಹಾಕಿ ಹಲ್ಲೆ ನಡೆಸಿದ್ದ ಕುರಿತು ಪೀಪಲ್‌ ಮೀಡಿಯಾ ವರದಿ ಮಾಡಿತ್ತು. ಮುಂದೆ ಓದಿ.👇🏼



Related Articles

ಇತ್ತೀಚಿನ ಸುದ್ದಿಗಳು

You cannot copy content of this page