ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ಮಧ್ಯಾಹ್ನ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಆರ್ ಅವರನ್ನು ಭೇಟಿಯಾಗಲಿದ್ದಾರೆ. ಹೈದರಾಬಾದ್ ನ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಭೋಜನದ ನಂತರ ಇಬ್ಬರ ನಡುವೆ ಮಹತ್ವದ ಚರ್ಚೆ ನಡೆಯಲಿದ್ದು, ಇಬ್ಬರು ನಾಯಕರ ಭೇಟಿ ಪ್ರಸಕ್ತ ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ.
ಇತ್ತೀಚಿಗಷ್ಟೇ ಕುಮಾರಸ್ವಾಮಿಯವರು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಹ ಭೇಟಿಯಾಗಿದ್ದು ಸ್ಮರಿಸಬಹುದಾಗಿದೆ.