ಕುತೂಹಲ ಕೆರೆಳಿಸಿದ ಹೆಚ್.ಡಿ.ಕೆ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಆರ್ ಭೇಟಿ

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ಮಧ್ಯಾಹ್ನ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಆರ್ ಅವರನ್ನು ಭೇಟಿಯಾಗಲಿದ್ದಾರೆ. ಹೈದರಾಬಾದ್ ನ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಭೋಜನದ ನಂತರ ಇಬ್ಬರ ನಡುವೆ ಮಹತ್ವದ ಚರ್ಚೆ ನಡೆಯಲಿದ್ದು, ಇಬ್ಬರು ನಾಯಕರ ಭೇಟಿ ಪ್ರಸಕ್ತ ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ.

ಇತ್ತೀಚಿಗಷ್ಟೇ ಕುಮಾರಸ್ವಾಮಿಯವರು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಹ ಭೇಟಿಯಾಗಿದ್ದು ಸ್ಮರಿಸಬಹುದಾಗಿದೆ.

Related Articles

ಇತ್ತೀಚಿನ ಸುದ್ದಿಗಳು