ಲಡಾಖ್‌ನಲ್ಲಿ ಭೀಕರ ಹಿಮಪಾತ: ಜೋಜಿಲಾ ಪಾಸ್ ಬಳಿ ಏಳು ಮಂದಿ ಸಾವು, ಹಲವು ವಾಹನಗಳು ಮಣ್ಣುಪಾಲು

ಲಡಾಖ್‌ನ ಶ್ರೀನಗರ-ಲೇಹ್ ಹೆದ್ದಾರಿಯ ಜೋಜಿಲಾ ಪಾಸ್ ಬಳಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಸಿಲುಕಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಇತರ ಐದು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಮಪಾತದ ತೀವ್ರತೆಗೆ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಹಲವು ವಾಹನಗಳು ಹಿಮದ ರಾಶಿಯ ಅಡಿಯಲ್ಲಿ ಸಿಲುಕಿಕೊಂಡಿವೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ಮತ್ತು ಪೊಲೀಸ್ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಹಿಮದ ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲು ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿವೆ.

ಈ ದುರಂತದ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು