Wednesday, January 7, 2026

ಸತ್ಯ | ನ್ಯಾಯ |ಧರ್ಮ

ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನ ಮೇಲೆ ಚಾಕು ಇರಿತ, ಪ್ರಾಣಾಪಾಯದಿಂದ ಪಾರು

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನ ಮೇಲೆ ದುಷ್ಕರ್ಮಿಗಳು ಚಾಕು ದಾಳಿ ನಡೆಸಿದ ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ.

ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿ ಬಸವಂತ ಕಡಲೇಕರ್ (32) ಎಂಬವರು ಗಾಯಗೊಂಡವರು. ಬೈಕ್‌ನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು, ಕಾರು ನಿಲ್ಲಿಸಿ ಕೆಳಗೆ ನಿಂತಿದ್ದ ಬಸವಂತನ ಮೇಲೆ ಏಕಾಏಕಿ ಚಾಕುವಿನಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಎದೆ ಹಾಗೂ ಭುಜ ಸೇರಿ ನಾಲ್ಕು ಕಡೆ ಚಾಕು ಇರಿಸಲಾಗಿದೆ.

ಗಂಭೀರವಾಗಿ ಗಾಯಗೊಂಡ ಬಸವಂತನನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಡಿಸಿಪಿ ನಾರಾಯಣ ಬರಮಣಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃಣಾಲ್ ಹೆಬ್ಬಾಳ್ಕರ್ ಅವರೂ ಸಹ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆಯೇ ದಾಳಿಗೆ ಕಾರಣ ಎನ್ನಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page