Home ದೇಶ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

0

ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಹದಗೆಟ್ಟಿದೆ.

ಮಂಗಳವಾರ ಅಸ್ವಸ್ಥರಾಗಿದ್ದ ಅವರನ್ನು ಅವರ ಕುಟುಂಬ ಸದಸ್ಯರು ದೆಹಲಿ ಏಮ್ಸ್‌ಗೆ ಕರೆದೊಯ್ದಿದ್ದಾರೆ. ಲಾಲು ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅನಾರೋಗ್ಯದ ಕಾರಣ ಸೋಮವಾರ ಪಾಟ್ನಾದಿಂದ ದೆಹಲಿಗೆ ತೆರಳಿದ್ದರು ಎಂದು ತಿಳಿದುಬಂದಿದೆ.

ಲಾಲು ಪ್ರಸಾದ್ ಯಾದವ್ ಅವರು ಕೆಲ ದಿನಗಳಿಂದ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಲಾಲು ಹಲವಾರು ವರ್ಷಗಳಿಂದ ಮೂತ್ರಪಿಂಡ ಮತ್ತು ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.

ಲಾಲು ಪ್ರಸಾದ್ ನವೆಂಬರ್ 2022 ರಲ್ಲಿ ಸಿಂಗಾಪುರದಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಲಾಲು ಅವರ ಪುತ್ರಿ ರೋಹಿಣಿ ಕಿಡ್ನಿ ದಾನ ಮಾಡಿದ್ದರು. ಆ ಬಳಿಕ ಕೆಲ ಕಾಲ ಭಾರತಕ್ಕೆ ವಾಪಸ್ ಬಂದರು. ಅನಾರೋಗ್ಯದಿಂದ ಚೇತರಿಸಿಕೊಂಡ ಲಾಲು ಮತ್ತೆ ರಾಜಕೀಯದಲ್ಲಿ ಸಕ್ರಿಯರಾದರು. ಏತನ್ಮಧ್ಯೆ, ಮತ್ತೆ ಆರೋಗ್ಯ ಕೈಕೊಟ್ಟಿದೆ.

You cannot copy content of this page

Exit mobile version