Home ಬ್ರೇಕಿಂಗ್ ಸುದ್ದಿ ಲಂಚದ ಹಣದಿಂದ ಬಿಜೆಪಿಯ ಜನಸ್ಪಂದನ ಕಾರ್ಯಕ್ರಮ : ಸಿದ್ದರಾಮಯ್ಯ

ಲಂಚದ ಹಣದಿಂದ ಬಿಜೆಪಿಯ ಜನಸ್ಪಂದನ ಕಾರ್ಯಕ್ರಮ : ಸಿದ್ದರಾಮಯ್ಯ

0

ಹುಬ್ಬಳ್ಳಿ: ಬಾದಾಮಿ ಕ್ಷೇತ್ರದಲ್ಲಿ ಮಳೆಯಿಂದ ಹಾನಿಗೀಡಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಕೇಳಿ, ಅವುಗಳಿಗೆ ಶಾಶ್ವತ ಪರಿಹಾರ ಕೊಡಿಸುವ ಬಗ್ಗೆ ಸರ್ಕಾರದೊಂದಿಗೆ ಮಾತನಾಡಲಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದ ಬಹಳಷ್ಟು ಕಡೆಗಳಲ್ಲಿ ಅಧಿಕವಾಗಿ ಮಳೆಯಾಗಿದ್ದು ಪ್ರವಾಹ ಪರಿಸ್ಥಿತಿ ಸೃಷ್ಠಿಯಾಗಿದೆ. ಸುಮಾರು 7 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಾಶವಾಗಿದೆ. ಇದಾಗಿಯೂ ಸರ್ಕಾರದಿಂದ ರೈತರಿಗೆ ಯಾವುದೇ ರೀತಿಯ ಪರಿಹಾರವನ್ನು ಕೊಟ್ಟಿಲ್ಲ  ಎಂದರು.

ಈಗಿನ ನೆರೆ ಪರಿಸ್ಥಿತಿಗೆ ರಾಜ್ಯ ಸರ್ಕಾರವೇ ಕಾರಣ. ನಮ್ಮ ಸರ್ಕಾರದ ಅವಧಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಮಾಡುವ ಕೆರೆ ಹೂಳೆತ್ತುವ ಕಾರ್ಯವನ್ನು ಮಾಡುತ್ತಿದ್ದೆವು, ಆದರೆ ಈ ಸರ್ಕಾರ ಕಾಮಗಾರಿಗಳನ್ನುನಿಲ್ಲಿಸಿದೆ ಎಂದು ಟೀಕಿಸಿದರು.

ಸಾಕಷ್ಟು ಕಡೆಗಳಲ್ಲಿ ರಸ್ತೆಗಳ ಮೇಲೆ ನೀರು ನಿಂತು ಜನರು ಬೋಟ್‌ ಗಳಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಿಜೆಪಿ ಅವರು ಜನರ ಈ ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸದೆ ಜನಸ್ಪಂದನ ಕಾರ್ಯಕ್ರಮ ಅಂತ ಹೇಳಿ ಸ್ಟೇಜ್‌ ಮೇಲೆ ಡ್ಯಾನ್ಸ್‌ ಮಾಡುತ್ತಿದ್ದರೆ ಹೇಗೆ? ಇವರಿಗೆ ನಿಜವಾಗಿ ಜನರ ಬಗ್ಗೆ ಕಾಳಜಿ ಇದೆಯಾ? ಲಂಚ ಹೊಡೆದು ಸಂಪಾದಿಸಿರುವ ಹಣದಲ್ಲಿ ಜನ ಸೇರಿಸಿಕೊಂಡು ಜನಸ್ಪಂದನೆ ಎಂದು ಕಾರ್ಯಕ್ರಮ ಮಾಡಿದರೆ ಅದನ್ನು ಜನ ಒಪ್ಪಿಕೊಳ್ಳಲು ಸಿದ್ಧರಿದ್ದಾರ? ಎಂದು ಪ್ರಶ್ನಿಸಿದರು.

ಉಮೇಶ್‌ ಕತ್ತಿ ಅವರು ಉತ್ತರ ಕರ್ನಾಟಕದ ಪ್ರಭಾವಿ ನಾಯಕರು ಮತು ಎಂಟು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದು, ಪ್ರಸ್ತುತ ಸರ್ಕಾರದಲ್ಲಿ ಸಚಿವರು ಆಗಿದ್ದವರು. ಇವರು ಮರಣ ಹೊಂದಿದಾಗ ಒಂದು ಕಡೆ ಶೋಕಾಚರಣೆ ಮಾಡುತ್ತೇವೆ ಎನ್ನುತ್ತಾರೆ, ಇನ್ನೊಂದು ಕಡೆ ಅವರ ಭಾವಚಿತ್ರದ ಮುಂದೆ ಬಿಜೆಪಿ ನಾಯಕರೇ ಡ್ಯಾನ್ಸ್‌ ಮಾಡುತ್ತಾರೆ. ಇದೇನಾ ಅವರಿಗೆ ಕೊಡುವ ಗೌರವ? ಈ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ, ಬರೀ ದುಡ್ಡು ಹೊಡೆಯುವ ಬಗ್ಗೆ ಮಾತ್ರ ಕಾಳಜಿ ಇದೆ ಎಂದು ಕಿಡಿಕಾರಿದರು.

ಸದನದಲ್ಲಿ ಪ್ರವಾಹ, 40% ಕಮಿಷನ್‌ ಹಗರಣ ಮುಂತಾದ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಪಿಎಸ್‌ಐ ನೇಮಕಾತಿಯಲ್ಲಿ ಲಂಚ ಪಡೆದಿದ್ದನ್ನು ಬಿಜೆಪಿಯ ಒಬ್ಬ ಶಾಸಕರೇ ಒಪ್ಪಿಕೊಂಡಿದ್ದಾರೆ, ಅವರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡು, ಅವರನ್ನು ತಕ್ಷಣವೇ ಬಂಧಿಸಿ ವಿಚಾರಣೆ ನಡೆಸಬೇಕು ಎಂದರು.

ದಾವಣಗೆರೆಯಲ್ಲಿ ನಡೆದ ನನ್ನ ಜನ್ಮದಿನದ ಅಮೃತೋತ್ಸವ ಸಮಾರಂಭಕ್ಕೆ ಉತ್ತರವಾಗಿ ಬಿಜೆಪಿಯವರು ಜನಸ್ಪಂದನ ಕಾರ್ಯಕ್ರಮ ಮಾಡುತ್ತಿದ್ದಾರೆ. ನಮ್ಮ ಕಾರ್ಯಕ್ರಮಕ್ಕೆ ಜನ ಸ್ವಯಂಪ್ರೇರಿತವಾಗಿ ಬಂದಿದ್ದು, ಆದರೆ ಬಿಜೆಪಿ ಅವರ ಬಳಿ ಇರುವ ಭ್ರಷ್ಟ ಹಣ ಮತ್ತು ಅಧಿಕಾರದ ಬಲದಿಂದ ಜನ ಸೇರಿಸುತ್ತಿದ್ದಾರೆ ಎಂದು ಕಿಡಿಕಾರಿದರು.

You cannot copy content of this page

Exit mobile version