ತಮಿಳುನಾಡಿನಲ್ಲಿ ಭೂಕುಸಿತ: ಮಣ್ಣಿನಡಿ ಸಿಲುಕಿ ಏಳು ಮಂದಿ ನಾಪತ್ತೆ

ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ಅಣ್ಣಾಮಲಯಾರ್ ಬೆಟ್ಟದ ಕೆಳಭಾಗದ ಮನೆಗಳಿಗೆ ಹಾನಿಯಾಗಿದೆ. ಮೂರು ಮನೆಗಳು ಮಣ್ಣಿನಡಿ ಸಿಲುಕಿವೆ.

ಮಗು ಸೇರಿದಂತೆ 7 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ತಡರಾತ್ರಿಯಾದ್ದರಿಂದ ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು.

ಇದೀಗ ತಿಂಡಿವನಂನಿಂದ ಎನ್‌ಡಿಆರ್‌ಎಫ್ ತಂಡವು ಪರಿಹಾರ ಕಾರ್ಯಾಚರಣೆಗಾಗಿ ತಿರುವಣ್ಣಾಮಲೈಗೆ ಮರಳಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಸೇನೆ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿದೆ.

ಫೆಂಗಲ್ ಚಂಡಮಾರುತಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ 9 ಸಾವುಗಳು ವರದಿಯಾಗಿವೆ.

Related Articles

ಇತ್ತೀಚಿನ ಸುದ್ದಿಗಳು