Friday, June 14, 2024

ಸತ್ಯ | ನ್ಯಾಯ |ಧರ್ಮ

ಮಹಾರಾಷ್ಟ್ರದ ರಾಯಗಢದಲ್ಲಿ ಭೂಕುಸಿತ: 4 ಮೃತದೇಹಗಳು ಪತ್ತೆ, 100 ಮಂದಿ ಸಮಾಧಿಯಾಗಿರುವ ಶಂಕೆ

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದ ಮೇಲೆ ಭೂಕುಸಿತವಾಗಿದ್ದು ಇದುವರೆಗೆ ನಾಲ್ವರ ಮೃತದೇಹಗಳು ಪತ್ತೆಯಾಗಿದ್ದು, ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೂಕುಸಿತದ ಬಗ್ಗೆ ಮಾಹಿತಿ ಪಡೆದ ಎರಡು ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದುವರೆಗೆ 22 ಮಂದಿಯನ್ನು ರಕ್ಷಿಸಲಾಗಿದೆ.

ಭೂಕುಸಿತದಲ್ಲಿ 30ಕ್ಕೂ ಹೆಚ್ಚು ಕುಟುಂಬಗಳು ಸಿಲುಕಿರುವ ಆತಂಕವಿದೆ.
ಮಣ್ಣಿನಡಿಯಲ್ಲಿ ಸುಮಾರು 100 ಮಂದಿ ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಅಪಘಾತ ನಡೆದ ಸ್ಥಳವು ಮೋರ್ಬಿ ಅಣೆಕಟ್ಟಿನಿಂದ 6 ಕಿ.ಮೀ ದೂರದಲ್ಲಿದೆ. ಅಪಘಾತದಲ್ಲಿ ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಮಹಾರಾಷ್ಟ್ರದ ಸಚಿವರಾದ ಉದಯ್ ಸಾಮಂತ್ ಮತ್ತು ದಾದಾ ಭೂಸೆ ಘಟನಾ ಸ್ಥಳಕ್ಕೆ ತಲುಪಿದ್ದಾರೆ. ಅವರು ಅಲ್ಲಿ ರಕ್ಷಣಾ ಕಾರ್ಯಾಚರಣೆಯ ಅವಲೋಕನ ನಡೆಸಿದರು.

ಭೂಕುಸಿತ ಸಂಭವಿಸಿದ ಸ್ಥಳವನ್ನು ತಲುಪಲು 2 ಗಂಟೆಗಳ ಕಾಲ ನಡೆದೇ ಹೋಗಬೇಕಾಗಿದೆ, ಇದರಿಂದಾಗಿ ಪರಿಹಾರ ಮತ್ತು ರಕ್ಷಣಾ ಕಾರ್ಯವು ಸವಾಲಿನದಾಗಿದೆ ಎಂದು ಡಿಎಂ ಹೇಳಿದರು. ಪನ್ವೇಲ್ ಮತ್ತು ನವಿ ಮುಂಬೈಯಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೆ ವಿಷಯ ತಿಳಿಸಲಾಗಿದೆ ಮತ್ತು ಪೀಡಿತರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೇವೆಗಳನ್ನು ಒದಗಿಸಲು ಸೂಚನೆ ನೀಡಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು