Wednesday, May 21, 2025

ಸತ್ಯ | ನ್ಯಾಯ |ಧರ್ಮ

ಎಲ್ಲಾ ಬ್ಯಾಂಕ್ ಸಿಬ್ಬಂದಿಗೆ ಭಾಷಾ ಸಂವೇದನಾ ತರಬೇತಿಯನ್ನು ಕಡ್ಡಾಯಗೊಳಿಸಿ: ಸಿ.ಎಂ. ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಎಸ್‌ಬಿಐ ಬ್ಯಾಂಕ್‌ನ ಮ್ಯಾನೇಜರ್‌ ಹುದ್ದೆಯಲ್ಲಿರುವ ಮಹಿಳೆಯು ಕನ್ನಡಿಗರೊಂದಿಗೆ ದರ್ಪದಿಂದ ಮಾತನಾಡಿರುವದನ್ನ ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಭಾರತದಾದ್ಯಂತ ಎಲ್ಲಾ ಬ್ಯಾಂಕ್ ಸಿಬ್ಬಂದಿಗೆ ಸಾಂಸ್ಕೃತಿಕ ಮತ್ತು ಭಾಷಾ ಸಂವೇದನಾ ತರಬೇತಿಯನ್ನು ಕಡ್ಡಾಯಗೊಳಿಸಬೇಕೆಂದು ಭಾರತ ಹಣಕಾಸು ಸಚಿವಾಲಯಕ್ಕೆ ಒತ್ತಾಯಿಸಿದ್ದಾರೆ.

ಈ ಕುರಿತು ತಮ್ಮ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿರುವ ಎಸ್‌ಬಿಐ ಶಾಖಾ ವ್ಯವಸ್ಥಾಪಕರು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾತನಾಡಲು ನಿರಾಕರಿಸಿ ನಾಗರಿಕರನ್ನು ಕಡೆಗಣಿಸುತ್ತಿರುವುದು ತೀವ್ರವಾಗಿ ಖಂಡಿಸಿದ್ದಾರೆ.

ಅಧಿಕಾರಿಯನ್ನು ವರ್ಗಾವಣೆ ಮಾಡುವಲ್ಲಿ ಎಸ್‌ಬಿಐನ ತ್ವರಿತ ಕ್ರಮವನ್ನು  ಅವರು ಪ್ರಶಂಸಿದ್ದು. ಇನ್ನು ಮುಂದೆ ಆದಾಗ್ಯೂ, ಅಂತಹ ಘಟನೆಗಳು ಮರುಕಳಿಸಬಾರದು. ಎಲ್ಲಾ ಬ್ಯಾಂಕ್ ಉದ್ಯೋಗಿಗಳು ಗ್ರಾಹಕರನ್ನು ಘನತೆಯಿಂದ ನಡೆಸಿಕೊಳ್ಳಬೇಕು ಮತ್ತು ಸ್ಥಳೀಯ ಭಾಷೆಯಲ್ಲಿ ಮಾತನಾಡಲು ಎಲ್ಲ ಪ್ರಯತ್ನಗಳನ್ನು ಮಾಡಬೇಕು ಎಂದು ತಿಳಿಸಿದ್ದಾರೆ.

ಜೊತೆಗೆ ಸ್ಥಳೀಯ ಭಾಷೆಯನ್ನು ಗೌರವಿಸುವುದು ಎಂದರೆ ಜನರನ್ನು ಗೌರವಿಸುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page