Thursday, June 13, 2024

ಸತ್ಯ | ನ್ಯಾಯ |ಧರ್ಮ

ʼಲಂಕಾಸುರʼ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್

ಬೆಂಗಳೂರು: ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ʼಲಂಕಾಸುರʼ ಚಿತ್ರಕ್ಕೆ, ಪ್ರಾದೇಶಿಕ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರ ದೊರಕಿದೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಿದ್ದು ಪ್ರೇಕ್ಷಕರಲ್ಲಿ ಬಹುನಿರೀಕ್ಷೆ ಮೂಡಿಸಿದೆ.

ಬಹು ನಿರೀಕ್ಷಿತ ಈ ಚಿತ್ರವನ್ನು ಟೈಗರ್ ಟಾಕೀಸ್ ಲಾಂಛನದಲ್ಲಿ ವಿನೋದ್ ಪ್ರಭಾಕರ್ ನಿರ್ಮಿಸಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರಾಗಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಜನರ ಮೆಚ್ಚುಗೆ ಗಳಿಸಿದೆ. ಈ ಚಿತ್ರದ ಆಕ್ಷನ್ ಸನ್ನಿವೇಶಗಳು ಮೈನವಿರೇಳಿಸುವ ಹಾಗಿದೆ. ಐದು ಸಾಹಸ ಸನ್ನಿವೇಶಗಳಿದ್ದು, ಡಿಫರೆಂಟ್ ಡ್ಯಾನಿ, ವಿನೋದ್, ಚೇತನ್ ಡಿಸೋಜ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಮಾಡಿದ್ದಾರೆ. 

ಪ್ರಮೋದ್ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ವಿಜೇತ್ ಕೃಷ್ಣ ಸಂಗೀತ ನಿರ್ದೇಶನ, ಸುಜ್ಞಾನ್ ಛಾಯಾಗ್ರಹಣ, ಮುರಳಿ, ಮೋಹನ್ ಅವರ ನೃತ್ಯ ನಿರ್ದೇಶನ ಹಾಗೂ ದೀಪು ಎಸ್ ಕುಮಾರ್ ಸಂಕಲನ ಈ ಚಿತ್ರಕ್ಕಿದ್ದು, ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಪಾರ್ವತಿ ಅರುಣ್ ನಟಿಸಿದ್ದಾರೆ. ಮೊದಲ ಬಾರಿಗೆ ಲೂಸ್ ಮಾದ ಯೋಗಿ, ವಿನೋದ್ ಪ್ರಭಾಕರ್ ಅವರೊಂದಿಗೆ ಅಭಿನಯಿದ್ದಾರೆ. ಹಿರಿಯ ನಟರಾದ ದೇವರಾಜ್ ಹಾಗೂ ರವಿಶಂಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು