ಹಾಸನ: ಸಕಲೇಶಪುರದ ಎ.ಪಿ.ಎಂ.ಸಿ ಮೈದಾನದಲ್ಲಿ 2024 ಡಿಸೆಂಬರ್ 23ರ ಸೋಮವಾರದಂದು ಬೆಳಗ್ಗೆ 10:30ಕ್ಕೆ ಕರ್ನಾಟಕ ಬೆಳೆಗಾರರ ಒಕ್ಕೂಟದ ವತಿಯಿಂದ ಬೆಳೆಗಾರರ ಬೃಹತ್ ಸಮಾವೇಶ ಮತ್ತು ವಾರ್ಷಿಕ ಮಹಾಸಭೆಯನ್ನು ನಡೆಸಲಾಗುವುದು ಎಂದು ಕರ್ನಾಟಕ ಗೋವರ್ಸ್ ಫೆಡರೇಷನ್ ಅಧ್ಯಕ್ಷ ಡಾ. ಹೆಚ್.ಟಿ. ಮೋಹನ್ ಕುಮಾರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಈ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದ ವಾಣಿಜ್ಯ ಸಚಿವರಾದ ಪಿಯೂಷ್ ಗೋಯಲ್‌ರವರು, ಕೇಂದ್ರ ಉಕ್ಕು ಮತ್ತು ಬಾರಿ ಕೈಗಾರಿಕಾ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ಕೇಂದ್ರ ರೈಲ್ವೆ ಸಚಿವಾಲಯದ ರಾಜ್ಯ ಸಚಿವರಾದ ಸೋಮಣ್ಣ, ಹಾಗೂ ರಾಜ್ಯ ಸರ್ಕಾರದ ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಅರಣ್ಯ ಸಚಿವರಾದ ಈಶ್ವರ ಖಂಡ್ರೆಯವರು, ಸಹಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ, ಪ್ರತಿಪಕ್ಷ ನಾಯಕರಾದ ಆರ್. ಅಶೋಕ್, ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೇಯಸ್‌ಪಟೇಲ್, ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ, ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ರವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರಾದ ತೇಜಸ್ವಿ ಸೂರ್ಯ ರವರು ಹಾಗೂ ಕಾಫಿ ಬೆಳೆಯುವ ಪ್ರದೇಶಗಳ ಮಾನ್ಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು, ಮಾನ್ಯ ಮಾಜಿ ಶಾಸಕರು, ಮಾನ್ಯ ಮಾಜಿ ವಿಧಾನ ಪರಿಷತ್ ಸದಸ್ಯರುಗಳು, ಹಾಗೂ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು. ಈ ಸಮಾವೇಶದಲ್ಲಿ ಕೃಷಿ ವಸ್ತು ಪ್ರದರ್ಶನ ಹೆಚ್ಚಿನ ಸಂಖ್ಯೆಯಲ್ಲಿರಲಿದೆ.ಈ ಸಮಾವೇಶದಲ್ಲಿ ಕಾಫಿ ಬೆಳೆಗಾರರ ಹಲವಾರು ವಿಚಾರಗಳು ಮಂಡನೆ ಆಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾಫಿ ಬೆಳೆಗಾರರು ಭಾಗವಹಿಸಬೇಕಾಗಿ ಈ ಮೂಲಕ ಕೇಳಿಕೊಳ್ಳುತ್ತೇವೆ. ಸಮಾವೇಶಕ್ಕೆ ಹೆಚ್ಚಿನ ಮಹಿಳಾ ಬೆಳೆಗಾರರು ಭಾಗವಹಿಸಬೇಕಾಗಿ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ಬಿ. ಕೃಷ್ಣಪ್ಪ, ಜಿಲ್ಲಾ ಪ್ಲಾಂಟರ್ಸ್ ಸಂಘದ ಅಧ್ಯಕ್ಷ ಪರಮೇಶ್ವರ್, ಬೇಲೂರು ತಾಲೂಕು ಕಾಫಿ ಬೆಳೆಗಾರರ ಅದ್ಯಕ್ಷ ಅದ್ಧೂರಿ ಕುಮಾರ್, ನಿರ್ದೇಶಕ ಯತೀಶ್, ರಾಮಕೃಷ್ಣ ಇತರರು ಉಪಸ್ಥಿತರಿದ್ದರು.