ಲಷ್ಕರ್‌–ಎ–ತಯಬಾ  ಸಂಘಟನೆಗೆ ಸೇರಿದ ಮೂವರು ಉಗ್ರರು ಬಂಧನ

ಶ್ರೀನಗರ :  ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‌  ಜಿಲ್ಲೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಎನ್‌ಕೌಂಟರ್‌  ನಡೆದಿದೆ ಎಂದು ಪೊಲೀಸರು ತಿಳಿಸಿದ್ದು, ಲಷ್ಕರ್‌–ಎ–ತಯಬಾ (ಎಲ್‌ಇಟಿ) ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ.

ಬುದ್ಗಾಮ್‌ನ ವಾಟರ್‌ಹೇಲ್ ಪ್ರದೇಶದಲ್ಲಿ ಉಗ್ರರು ನೆಲೆಗೊಂಡಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಬಂಧಿಸಲಾಗಿದೆ ಎಂದು ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

ಬಂಧಿತ ಉಗ್ರರ ಬಳಿ 5 ಪಿಸ್ತೂಲ್‌ಗಳು, 5 ಮ್ಯಾಗಜಿನ್‌ಗಳು, 50 ಗುಂಡುಗಳು ಸೇರಿದಂತೆ ಎರಡು ಹ್ಯಾಂಡ್ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. 

Related Articles

ಇತ್ತೀಚಿನ ಸುದ್ದಿಗಳು