Friday, April 26, 2024

ಸತ್ಯ | ನ್ಯಾಯ |ಧರ್ಮ

ಇಂದು ಬೆಂಗಳೂರಿನಲ್ಲಿ ಕೊನೆಯ ಟಿ20 ಪಂದ್ಯ: ವೈಟ್‌ ವಾಶ್‌ ಭಯದಲ್ಲಿ ಅಫ್ಘಾನ್

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಸರಣಿಯ ಅಂತಿಮ ಟಿ20 ಪಂದ್ಯ ಇಂದು (ಜನವರಿ 17) ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ 3-0 ಅಂತರದಲ್ಲಿ ಸರಣಿ ಕ್ಲೀನ್ ಸ್ವೀಪ್ ಮಾಡುವ ಗುರಿ ಹೊಂದಿದೆ.

ಮತ್ತೊಂದೆಡೆ ಮೊದಲೆರಡು ಪಂದ್ಯಗಳಲ್ಲಿ ಹೀನಾಯವಾಗಿ ಸೋತಿರುವ ಅಫ್ಘಾನಿಸ್ತಾನ ತಂಡ ಕೊನೆಯ ಪಂದ್ಯವನ್ನು ಗೆದ್ದು ವೈಟ್ ವಾಶ್ ಆಗುವ ಅವಮಾನದಿಂದ ಪಾರಾಗಲು ಬಯಸಿದೆ. ಹೀಗಾಗಿ ಇಂದು ಬೆಂಗಳೂರು ಮೈದಾನದಲ್ಲಿ ರೋಚಕ ಕದನ ನಡೆಯುವ ನಿರೀಕ್ಷೆ ಇದೆ. ಭಾರತ ಈಗಾಗಲೇ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಮೊಹಾಲಿಯಲ್ಲಿ ನಡೆದ ಮೊದಲ ಟಿ20ಯಲ್ಲಿ ಟೀಂ ಇಂಡಿಯಾ 6 ವಿಕೆಟ್‌ಗಳ ಜಯ ಸಾಧಿಸಿದ್ದು, ಇಂದೋರ್‌ನಲ್ಲಿ ನಡೆದ ಎರಡನೇ ಟಿ20ಯಲ್ಲಿ 6 ವಿಕೆಟ್‌ಗಳ ಜಯ ಸಾಧಿಸಿದೆ. ಇದೀಗ ರೋಹಿತ್ ಪಡೆ ಮೂರನೇ ಪಂದ್ಯ ಗೆಲ್ಲುವ ವಿಶ್ವಾಸದಲ್ಲಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ISTಸಂಜೆ 7 ಗಂಟೆಗೆ ಪ್ರಾರಂಭವಾಗುತ್ತದೆ. ಅದಕ್ಕೂ ಮುನ್ನ 6.30ಕ್ಕೆ ಟಾಸ್ ನಡೆಯಲಿದೆ. ಮೊದಲೆರಡು ಪಂದ್ಯಗಳನ್ನು ಗೆದ್ದು ಸರಣಿ ಕೈವಶ ಮಾಡಿಕೊಂಡಿರುವ ಭಾರತ ಮೂರನೇ ಪಂದ್ಯದಲ್ಲಿ ಕೆಲ ಬದಲಾವಣೆ ಮಾಡುವ ಸಾಧ್ಯತೆ ಇದೆ. ಮೊದಲೆರಡು ಪಂದ್ಯಗಳಲ್ಲಿ ಅವಕಾಶ ಸಿಗದ ಆಟಗಾರರು ಅಂತಿಮ ಪಂದ್ಯದಲ್ಲಿ ಆಡಬಹುದು. ಅದರಲ್ಲೂ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಈ ಪಂದ್ಯದಲ್ಲಿ ಆಡುವ ಅವಕಾಶವಿದೆ. ಏಕೆಂದರೆ ಅನುಭವಿ ವಿಕೆಟ್ ಕೀಪರ್ ಆಗಿದ್ದರೂ ಮೊದಲೆರಡು ಪಂದ್ಯಗಳಲ್ಲಿ ಸ್ಯಾಮ್ಸನ್ ಬದಲು ಜಿತೇಶ್ ಶರ್ಮಾಗೆ ಅವಕಾಶ ನೀಡಲಾಗಿತ್ತು. ಇದೀಗ ಅಂತಿಮ ಪಂದ್ಯದಲ್ಲಿ ಜಿತೇಶ್ ಔಟಾಗುವ ಸಾಧ್ಯತೆ ಇದ್ದು, ಸಂಜು ಸ್ಯಾಮ್ಸನ್ ಬದಲಿಗೆ ಮೂರನೇ ಪಂದ್ಯದಲ್ಲಿ ವಿಕೆಟ್ ಕೀಪರ್ ಹಾಗೂ ಬ್ಯಾಟ್ಸ್ ಮನ್ ಆಗಿ ಆಡುವ ಅವಕಾಶವಿದೆ.

ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಕುಲದೀಪ್ ಯಾದವ್, ಮುಖೇಶ್ ಕುಮಾರ್, ಜಿತೇಶ್ ಶರ್ಮಾ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ವಿರಾ ದುಬೆ ಟಿ ಕೊಹ್ಲಿ

ಅಫ್ಘಾನಿಸ್ತಾನ ತಂಡ:

ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್ (ನಾಯಕ), ಹಜರತುಲ್ಲಾ ಝಜೈ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜಾಯ್, ಮುಜೀಬ್ ಉರ್ ರಹಮಾನ್, ಶರಫುದ್ದೀನ್ ಅಶ್ರಫ್, ಕೈಸ್ ಅಹ್ಮದ್, ಹಕೀನ್, ಫಜಲ್, ನವೀನ್-ಫಜಲ್. ನೂರ್ ಅಹ್ಮದ್, ಮೊಹಮ್ಮದ್ ಸಲೀಂ ಶಾಫಿ, ಕರೀಂ ಜನತ್, ಇಕ್ರಮ್ ಅಲಿಖಿಲ್, ಫರೀದ್ ಅಹ್ಮದ್ ಮಲಿಕ್, ರಹಮತ್ ಶಾ, ಗುಲ್ಬದಿನ್ ನೈಬ್.

Related Articles

ಇತ್ತೀಚಿನ ಸುದ್ದಿಗಳು