Thursday, April 24, 2025

ಸತ್ಯ | ನ್ಯಾಯ |ಧರ್ಮ

ಪಹಲ್ಗಾಮ್ ಭಯೋತ್ಪಾದನೆ ಕೃತ್ಯ ಖಂಡಿಸಿ ವಕೀಲರ ಪ್ರತಿಭಟನೆ

ಹಾಸನ: ಪಹಲ್ಗಾಮ್ ಭಯೋತ್ಪಾದಕ ಕೃತ್ಯ ಖಂಡಿಸಿ ಹಾಗೂ ಭಯೋತ್ಪಾದನೆ ನಿಗ್ರಹಕ್ಕೆ ಕಠಿಣ ಕ್ರಮಕೈಗೊಳ್ಳಲು ಆಗ್ರಹಿಸಿ ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ಇಂದು ನ್ಯಾಯಾಲಯದ ಕಲಾಪದಿಂದ ದೂರ ಉಳಿದ ವಕೀಲರು ತಮ್ಮ ಸಂಘದ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಭಾರತದ ಸಮಗ್ರತೆ ಮತ್ತು ಐಕ್ಯತೆಗೆ ಧಕ್ಕೆಉಂಟು ಮಾಡಿರುವ ಭಯೋತ್ಪಾದಕರನ್ನು ಕೂಡಲೇ ಬಂಧಿಸಿ ಶಿಕ್ಷಿಸಬೇಕು ಎಂದು ಆಗ್ರಹಿಸಿದರು.

ಸಂಘದ ಅಧ್ಯಕ್ಷ ಪ್ರಸನ್ನ, ಉಪಾಧ್ಯಕ್ಷ ಯೋಗೀಶ್, ಖಜಂಚಿ ಎಚ್.ಎನ್. ಪ್ರತಾಪ್ ಹಾಗೂ ಸದಸ್ಯರು ಹಾಜರಿದ್ದರು

Related Articles

ಇತ್ತೀಚಿನ ಸುದ್ದಿಗಳು

You cannot copy content of this page