ಚುನಾವಣೆ ಮುಗಿದು ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಪಕ್ಷವನ್ನು ಕಾಂಗ್ರೆಸ್ ವ್ಯಂಗ್ಯ ಮಾಡಿದೆ. ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಕಾಂಗ್ರೆಸ್ ಪಕ್ಷ ‘ವಿರೋಧ ಪಕ್ಷದ ನಾಯಕ ಬೇಕಾಗಿದ್ದಾರೆ’ ಎಂದು ಪೋಸ್ಟ್ ಮಾಡಿದೆ.
ಈ ಹಿನ್ನೆಲೆಯಲ್ಲಿ ಫೇಸ್ಬುಕ್ ಮತ್ತು ಟ್ವಿಟ್ಟರ್ ನಲ್ಲಿ ಬಿಜೆಪಿ ಕಾಲೆಳೆದಿರುವ ಕಾಂಗ್ರೆಸ್ ಪಕ್ಷ
👉ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ
🔹ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
🔹ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
🔹RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
🔹ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು.
🔹ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ವಿಪಕ್ಷ ನಾಯಕರು ಬೇಕಾಗಿದ್ದಾರೆ!
ಎಂಬಂತೆ ಬಿಜೆಪಿ ಕಾಲೆಳೆದಿದೆ.
https://twitter.com/INCKarnataka/status/1674965923546173446?t=ZWjCXHaKumb1FHqbaU32TA&s=19
ಚುನಾವಣೆ ನಂತರದಲ್ಲಿ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ನಿರಂತರವಾಗಿ ಕಾಂಗ್ರೆಸ್ ಪಕ್ಷದ ಕಾಲೆಳೆದಿದ್ದ ಬಿಜೆಪಿಗೆ ಈಗ ಎರಡೆರಡು ಸಂಕಟ ಎದುರಾಗಿದೆ. ಸಮರ್ಥ ನಾಯಕನ ಆಯ್ಕೆಯ ಗೊಂದಲವೋ ಅಥವಾ ಪಕ್ಷದ ಒಳಗಿನ ಆಂತರಿಕ ಬಿಕ್ಕಟ್ಟಿನ ಹಿನ್ನೆಲೆಯಿಂದಲೋ ಚುನಾವಣೆ ಕಳೆದು ಒಂದೂವರೆ ತಿಂಗಳಾದರೂ ವಿರೋಧ ಪಕ್ಷದ ನಾಯಕ ಯಾರು ಎಂಬ ಗೊಂದಲದಲ್ಲಿ ಬಿಜೆಪಿ ಬಿದ್ದಿದೆ.