Sunday, June 16, 2024

ಸತ್ಯ | ನ್ಯಾಯ |ಧರ್ಮ

ರಾಜ್ಯ ಎಎಪಿಯಲ್ಲಿ ನಾಯಕತ್ವ ಬದಲಾವಣೆ ; ಮುಖ್ಯಮಂತ್ರಿ ಚಂದ್ರು ಗೆ ಸಾರಥ್ಯ

ವಿಧಾನಸಭಾ ಚುನಾವಣೆ ನಂತರದ ಮಹತ್ವದ ಬೆಳವಣಿಗೆಯಾಗಿ ರಾಜ್ಯ ಆಮ್ ಆದ್ಮಿ ಪಕ್ಷದಲ್ಲಿ ನಾಯಕತ್ವ ಬದಲಾವಣೆಯಾಗಿದೆ. ಹಾಲಿ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ರಾಜೀನಾಮೆ ಸಲ್ಲಿಸಿದ್ದು, ಆ ಸ್ಥಾನಕ್ಕೆ ಹಿರಿಯ ನಟ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರಾದ ಮುಖ್ಯಮಂತ್ರಿ ಚಂದ್ರು ಅವರನ್ನು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಆಯ್ಕೆ ಮಾಡಿದೆ.

ಈ ಬಗ್ಗೆ ಪಕ್ಷದ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ. ಇವರೊಂದಿಗೆ ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಬಿ.ಟಿ. ನಾಗಣ್ಣ ಹಾಗೂ ಅರ್ಜುನ್ ಪರಪ್ಪ ಹಲಗಿಗೌಡರ್ ರವರುಗಳನ್ನು ನೇಮಿಸಲಾಗಿದೆ. ಈ ಹಿಂದಿನ ರಾಜ್ಯಾಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ರವರನ್ನು ರಾಷ್ಟ್ರೀಯ ಜಂಟಿ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ.

ವಿಧಾನಸಭಾ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ಒಳಗೆ ನಾಯಕತ್ವದ ಬದಲಾವಣೆಯ ಮಾತುಗಳು ಈ ಹಿಂದೆ ಕೇಳಿ ಬಂದಿತ್ತು. ಹಾಲಿ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ಚುನಾವಣಾ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ

ಆಮ್ ಆದ್ಮಿ ಪಕ್ಷ ಸ್ಥಾಪನೆಯಾದ ದಿನದಿಂದಲೂ ರಾಜ್ಯದಲ್ಲಿ ಪಕ್ಷ ಸಂಘಟಿಸಲು ಪೃಥ್ವಿ ರೆಡ್ಡಿ ಶ್ರಮಿಸಿದ್ದರು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೊತೆಗೆ ಶುರುವಿನಿಂದಲೂ ಗುರುತಿಸಿಕೊಂಡಿದ್ದು, ಹಲವು ಜನಪರ ಚಳುವಳಿಗಳನ್ನು ರಾಜ್ಯದಲ್ಲಿ ಸಂಘಟಿಸಿದ ಹೆಸರು ಪೃಥ್ವಿ ರೆಡ್ಡಿಯವರಿಗಿದೆ. ಭ್ರಷ್ಟಾಚಾರದ ವಿರುದ್ಧದ ನಾಗರಿಕರ ಆಂದೋಲನದ ಸಂಸ್ಥಾಪಕರಲ್ಲಿ ಪೃಥ್ವಿ ರೆಡ್ಡಿ ಒಬ್ಬರಾಗಿದ್ದರು.

ನಂತರ ಇಂಡಿಯಾ ಎಗೇನ್ಸ್ಟ್ ಕರಪ್ಷನ್ (IAC) ರಾಷ್ಟ್ರೀಯ ಕೋರ್ ಕಮಿಟಿಯ ಸದಸ್ಯರಾಗಿ, ಪೃಥ್ವಿ ಅಣ್ಣಾ ಹಜಾರೆ, ಅರವಿಂದ್ ಕೇಜ್ರಿವಾಲ್ ಮತ್ತು ಇತರರೊಂದಿಗೆ ರಾಷ್ಟ್ರವ್ಯಾಪಿ ಪ್ರಚಾರವನ್ನು ಮುನ್ನಡೆಸುವಲ್ಲಿ ನಿಕಟವಾಗಿ ಕೆಲಸ ಮಾಡಿದ್ಥಾರೆ. ಪ್ರಸ್ತುತ ಆಮ್ ಆದ್ಮಿ ಪಕ್ಷದ ಜವಾಬ್ದಾರಿಯ ನೇತೃತ್ವವನ್ನು ಎರಡು ಬಾರಿ ವಹಿಸಿದ್ದು, ಈ ಬಾರಿಯ ಚುನಾವಣೆಯಲ್ಲಿ ಪಕ್ಷದ ಸೋಲಿನ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸುವ ಬಗ್ಗೆ ಮಾತುಗಳು ಕೇಳಿ ಬಂದಿದೆ.

ನೂತನ ಅಧ್ಯಕ್ಷರ ಹೆಸರಿನಲ್ಲಿ ಹಲವು ಹೆಸರು ಕೇಳಿ ಬಂದಿತ್ತು. ಅಂತಿಮವಾಗಿ ಮುಖ್ಯಮಂತ್ರಿ ಚಂದ್ರು ಅವರ ಆಯ್ಕೆಯ ಬಗ್ಗೆ ಅಂತಿಮ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಚಂದ್ರು ಸಾರ್ವಜನಿಕ ಜೀವನದಲ್ಲಿ ನಟರಾಗಿ ಗುರುತಿಸಿಕೊಂಡು ನಂತರ ರಾಮಕೃಷ್ಣ ಹೆಗ್ಗಡೆಯವರ ಕಾಲದಲ್ಲಿ ಗೌರಿಬಿದನೂರು ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದ್ದರು. ನಂತರ ವಿಧಾನ ಪರಿಷತ್‌ನ ಸದಸ್ಯರಾಗಿ ಸೇವೆ ಸಲ್ಲಿಸಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ  ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು