ಪ್ರವಾಹ ಪೀಡಿತ ಪ್ರದೇಶಕ್ಕೆ ವೈಮಾನಿಕ ಸಮೀಕ್ಷೆ ಹೊರಟ ಮುಖ್ಯಮಂತ್ರಿ ನೇತೃತ್ವದ ತಂಡವನ್ನು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಗೇಲಿ ಮಾಡಿ ನೇರವಾಗಿ ಪ್ರಿಯಾಂಕ್ ಖರ್ಗೆ ಅವರಿಗೆ ಎಲ್ಲಾ ಇಲಾಖೆಗಳ ಸಚಿವ ಎಂದು ಟೀಕಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿ ನೆರೆಯಿಂದ ನಿಮ್ಮ ಕ್ಷೇತ್ರದ ಪರಿಸ್ಥಿತಿ ನೋಡಿ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ ರೈತರ ವಿಚಾರದಲ್ಲಿ ಉದಾಸೀನತೆ ಬೇಡ. ವೈಮಾನಿಕ ಸಮೀಕ್ಷೆ ನಡೆಸಿ ಕೇಂದ್ರಕ್ಕೆ ವರದಿ ಕೊಟ್ಟಿದ್ದೇವೆಂದರೆ ಸಾಲದು. ಕೇಂದ್ರದತ್ತ ಕೈತೋರಿಸಿ ಸಿಎಂ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು. ಕೇಂದ್ರ ಸರ್ಕಾರ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡಿರುವ ಉದಾಹರಣೆ ಇಲ್ಲದ ಕಾರಣ ರೈತರು ಸಂಕಷ್ಟದಲ್ಲಿದ್ದಾಗ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಂದಾಯ, ಕೃಷಿ ಸಚಿವರಿಗೆ ಕಲಬುರಗಿ, ಯಾದಗಿರಿ ಜಿಲ್ಲೆ ನೆನಪಾಗ್ತಿಲ್ವಾ ಎಂದು ಪ್ರಶ್ನಿಸಿರುವ ವಿಜಯೇಂದ್ರ, ಕಲ್ಯಾಣ ಕರ್ನಾಟಕ ಭಾಗದ ರೈತರು ಮತ್ತು ಬಡವರ ಬಗ್ಗೆ ತಾತ್ಸಾರ ಯಾಕೆ? ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರಿಗೆ ಧೈರ್ಯ ಹೇಳುವ ಜೊತೆಗೆ, ಕಲ್ಯಾಣ ಕರ್ನಾಟಕ ಭಾಗಕ್ಕೆ ಸರ್ಕಾರ ವಿಶೇಷ ಪ್ಯಾಕೇಜ್ ನೀಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ.