Tuesday, January 13, 2026

ಸತ್ಯ | ನ್ಯಾಯ |ಧರ್ಮ

ಪ್ರಿಯಾಂಕಾ ಗಾಂಧಿ ವಿರುದ್ಧ ಎಡ ರಂಗದಿಂದ ಚುನಾವಣಾ ಆಯೋಗಕ್ಕೆ ದೂರು

ತಿರುವನಂತಪುರಂ: ಕಾಂಗ್ರೆಸ್ ನಾಯಕಿ ಮತ್ತು ಯುಡಿಎಫ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಿರುದ್ಧ ಎಲ್‌ಡಿಎಫ್ ಮಂಗಳವಾರ ಚುನಾವಣಾ ಆಯೋಗಕ್ಕೆ (ಇಸಿ) ದೂರು ಸಲ್ಲಿಸಿದೆ. ಚುನಾವಣಾ ಪ್ರಚಾರಕ್ಕಾಗಿ ಧಾರ್ಮಿಕ ಸ್ಥಳಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಅದು ಹೇಳಿದೆ.

ಕಾಂಗ್ರೆಸ್ ಪಕ್ಷವು ಚುನಾವಣಾ ನಿಯಮಾವಳಿಗಳನ್ನು ಉಲ್ಲಂಘಿಸಿದೆ ಎಂದು ಎಲ್‌ಡಿಎಫ್ ವಯನಾಡ್ ಸಂಸದೀಯ ಸಮಿತಿ ಮಂಗಳವಾರ ದೂರಿನಲ್ಲಿ ತಿಳಿಸಿದೆ.

ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ಭಾಗವಾಗಿ, ಅವರ್ ಲೇಡಿ ಆಫ್ ಲೂರ್ಡ್ಸ್ ಚರ್ಚ್ ಎಂದೂ ಕರೆಯಲ್ಪಡುವ ಪಲ್ಲಿಕ್ಕನ್ನು ಚರ್ಚ್‌ನಲ್ಲಿ ಪ್ರಿಯಾಂಕಾ ಪ್ರಾರ್ಥನೆ ಸಲ್ಲಿಸುತ್ತಿರುವ ವೀಡಿಯೊಗಳು ಮತ್ತು ಫೋಟೋಗಳನ್ನು ನವೆಂಬರ್ 10 ರಂದು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ.

ಇವರೊಂದಿಗೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಟಿ.ಸಿದ್ಧಿಕಿ, ವಯನಾಡು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್.ಡಿ. ಅಪ್ಪಚ್ಚನವರನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page