Home ರಾಜಕೀಯ ವಿಧಾನ ಪರಿಷತ್ ಚುನಾವಣೆ: ಏಳು ಸ್ಥಾನಗಳಿಗೆ ಇಂದು ಮತದಾನ

ವಿಧಾನ ಪರಿಷತ್ ಚುನಾವಣೆ: ಏಳು ಸ್ಥಾನಗಳಿಗೆ ಇಂದು ಮತದಾನ

0

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಇಂದು ಗುರುವಾರ ಚುನಾವಣೆ ನಡೆಯಲಿದ್ದು, ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಸಂಜೆ 5 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ.

ಏಳನೇ ಸ್ಥಾನಕ್ಕೆ ತೀವ್ರ ಪೈಪೋಟಿ
ಶಾಸಕರ ಸಂಖ್ಯಾಬಲದ ಆಧಾರದಲ್ಲಿ ಕಾಂಗ್ರೆಸ್ 4 ಮತ್ತು ಬಿಜೆಪಿ 2 ಸ್ಥಾನಗಳನ್ನು ಗೆಲ್ಲುವುದು ಬಹುತೇಕ ನಿಶ್ಚಿತ. ಆದರೆ 7ನೇ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಡಿಕೆಶಿ ನೇರ ಕಣಕ್ಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಆಪ್ತ ವಿನಯ್ ಕಾರ್ತಿಕ್ ಅವರನ್ನು ಹೆಚ್ಚುವರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ. ಅದೇ ರೀತಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಪಕ್ಷದ ಶಾಸಕರ ವಿಶ್ವಾಸ ಉಳಿಸಿಕೊಳ್ಳುವ ಉದ್ದೇಶದಿಂದ ಗೋವಿಂದರಾಜ್ ಅವರನ್ನು ಕಣಕ್ಕಿಳಿಸಿದ್ದಾರೆ.

ರೆಸಾರ್ಟ್ ರಾಜಕೀಯ
ಅಡ್ಡ ಮತದಾನ ತಡೆಯಲು ಎಲ್ಲ ಪಕ್ಷಗಳು ತಂತ್ರ ರೂಪಿಸಿವೆ. ಕಾಂಗ್ರೆಸ್ ಶಾಸಕರನ್ನು ವಂಡರ್‌ಲಾ ರೆಸಾರ್ಟ್‌ನಲ್ಲಿ ಇರಿಸಲಾಗಿದ್ದು, ಇಂದು ನೇರವಾಗಿ ವಿಧಾನಸೌಧಕ್ಕೆ ಕರೆತರಲಾಗುವುದು. ಜೆಡಿಎಸ್ ಶಾಸಕರನ್ನು ದೇವನಹಳ್ಳಿ ಸಮೀಪದ ರೆಸಾರ್ಟ್‌ನಲ್ಲಿ ಇರಿಸಲಾಗಿದೆ.

ವಿಧಾನಸಭೆ ಬಲಾಬಲ
ವಿಧಾನಸಭೆಯ 224 ಸ್ಥಾನಗಳ ಪೈಕಿ 2 ಖಾಲಿ ಇವೆ. ಕಾಂಗ್ರೆಸ್ 135, ಬಿಜೆಪಿ 62, ಜೆಡಿಎಸ್ 18 ಶಾಸಕರನ್ನು ಹೊಂದಿದ್ದು, ಬಿಜೆಪಿಯಿಂದ ಉಚ್ಚಾಟಿತ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದಾರೆ.

You cannot copy content of this page

Exit mobile version