ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಮಾಡಿದ 60% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಕುಮಾರಸ್ವಾಮಿ ದಾಖಲಾತಿಗಳ ಸಮೇತ ಆರೋಪ ಮಾಡಬೇಕು, ಆ ಮೂಲಕ ಆರೋಪಗಳನ್ನು ಸಾಬೀತು ಪಡಿಸಬೇಕು, ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಹೇಳಿದ್ದಾರೆ.
ದಾವಣಗೆರೆಯ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ಆವರಣದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿ ರಾಜ್ಯ ಸರ್ಕಾರದ ಬೆಲೆ ಏರಿಕೆ ಮಾಡಿ, ರಾಜ್ಯ ಸರ್ಕಾರದ ಮೇಲೆ ಕೈ ತೋರಿಸುವುದು ನಿಲ್ಲಿಸಲಿ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಟಿಕೆಟ್ ದರ ಹೆಚ್ಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ ಎಂದು ತಿಳಿಸಿದರು.