ಕೆಪಿಎಸ್‌ಸಿ ಹಗರಣ ಸಂಪೂರ್ಣ ವರದಿ ಬರಲಿ ಅಲ್ಲಿಯವರೆಗು ಮಾತನಾಡಲ್ಲ- ಸಿಎಂ ಡಿಕೆಶಿ

ಬೆಂಗಳೂರು : ಕೆಪಿಎಸ್‌ಸಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಯ ಸಂಪೂರ್ಣ ವರದಿ ಬಂದ ಬಳಿಕವೇ ತಾನು ಮಾತನಾಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ವ ಬೆಂಗಳೂರಿನಲ್ಲಿ ಇಂದು  ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆ ಕುರಿತು ಸದ್ಯ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. “ಯಾರ್ಯಾರನ್ನು ಬಂಧಿಸಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಪ್ರಕರಣದಲ್ಲಿ ಯಾರ್ಯಾರು ಭಾಗಿಯಾಗಿದ್ದಾರೋ ಅವರನ್ನು ಬಂಧಿಸುತ್ತಾರೆ. ಕೆಪಿಎಸ್‌ಸಿ ಅಧ್ಯಕ್ಷರನ್ನು ನೇಮಕ ಮಾಡಿದ್ದು ಯಾರು ಎಂಬುದೂ ಪ್ರಶ್ನೆಯಾಗಿದೆ. ಮುಖ್ಯಮಂತ್ರಿಯಾಗಿ ಸಂಪೂರ್ಣ ವರದಿ ಬರುವವರೆಗೆ ನಾನು ಮಾತನಾಡುವುದಿಲ್ಲ. ಕಾಲವೇ ಉತ್ತರ ಕೊಡುತ್ತದೆ,” ಎಂದು ಹೇಳಿದರು.

ಇದೇ ವೇಳೆ ನೇಪಾಳದಲ್ಲಿ ಉಂಟಾಗಿರುವ ಪ್ರವಾಹದಲ್ಲಿ ಕನ್ನಡಿಗರು ಸಿಲುಕಿರುವ ಕುರಿತು ಪ್ರತಿಕ್ರಿಯಿಸಿದ ಸಿಎಂ, 14 ಮಂದಿ ಇನ್ನೂ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ತಿಳಿಸಿದರು. ನೇಪಾಳಕ್ಕೆ ತೆರಳಿದ್ದ ಒಂದು ತಂಡವೂ ಸಂಪರ್ಕಕ್ಕೆ ಸಿಕ್ಕಿಲ್ಲ. ಈ ಕುರಿತು ಕೇಂದ್ರ ವಿದೇಶಾಂಗ ಸಚಿವಾಲಯದೊಂದಿಗೆ ಮಾತನಾಡಲಾಗಿದ್ದು, ಕರ್ನಾಟಕದ ಅಧಿಕಾರಿಗಳನ್ನು ನೇಪಾಳಕ್ಕೆ ಕಳುಹಿಸಲಾಗಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು