ಮಾಜಿ ಕ್ರಿಕೆಟ್ ಆಟಗಾರ, ಉದ್ಯಮಿ ರಾಬಿನ್ ಉತ್ತಪ್ಪ ತಮ್ಮ ಸ್ವಂತ ಕಂಪನಿಯ ಉದ್ಯೋಗಿಗಳ ಫಿಎಫ್ ಹಣ ಪಾವತಿಸದೇ ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ಅವರ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿಗೊಳಿಸಲು ಪತ್ರ ಬರೆಯಲಾಗಿದೆ.
ಪಿಎಫ್‌ಒ ಪ್ರಾದೇಶಿಕ ಆಯುಕ್ತ ಷಡಾಕ್ಷರಿ ಗೋಪಾಲ ರೆಡ್ಡಿ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಲಿಕೇಶಿ ನಗರ ಪೊಲೀಸರಿಗೆ ಪತ್ರ ಬರೆದು, ಅರೆಸ್ಟ್ ವಾರೆಂಟ್ ಜಾರಿಗೆ ಮನವಿ ಮಾಡಿದ್ದಾರೆ.
ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿ ನಡೆಸುತ್ತಿದ್ದ ರಾಬಿನ್ ಉತ್ತಪ್ಪ, ತಮ್ಮ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವು ಉದ್ಯೋಗಿಗಳ ಪಿಎಫ್ ಹಣವನ್ನು ಖಾತೆಗೆ ಪಾವತಿಸದೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಹಿನ್ನೆಲೆಯಲ್ಲಿ ಈಗ ಪಿಎಫ್‌ಓ ರಿಜಿನಲ್ ಕಮಿಷನರ್ ಷಡಾಕ್ಷಿರಿ ರೆಡ್ಡಿ ಅವರು ಡಿಸೆಂಬರ್ ೪ ರಂದು ಪುಲಕೇಶಿ ನಗರ ಪೊಲೀಸರಿಗೆ ಪತ್ರ ಬರೆದು ವಾರೆಂಟ್ ಜಾರಿ ಮಾಡಿ ಪೊಲೀಸರಿಗೆ ಅರೆಸ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.ಈಗ ರಾಬಿನ್ ವಿದೇಶದಲ್ಲಿ ನೆಲೆಸಿರುವುದರಿಂದ ಅವರ ವಿರುದ್ಧ ಯಾವ ರೀತಿ ಕ್ರಮವನ್ನು ಪುಲಕೇಶಿ ನಗರ ಪೊಲೀಸರು ತೆಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ.