Home ದೇಶ ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿ ಆಳವಡಿಸಿದ್ದ 50 ಲಕ್ಷ ರೂಪಾಯಿ ಮೌಲ್ಯದ ಬೀದಿ ದೀಪಗಳ ಕಳ್ಳತನ

ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿ ಆಳವಡಿಸಿದ್ದ 50 ಲಕ್ಷ ರೂಪಾಯಿ ಮೌಲ್ಯದ ಬೀದಿ ದೀಪಗಳ ಕಳ್ಳತನ

0

ಅಯೋಧ್ಯೆ (ಯುಪಿ): ಅಯೋಧ್ಯೆಯ ಅತ್ಯಂತ ಸುರಕ್ಷತಾ ಪ್ರದೇಶದಲ್ಲಿರುವ ಭಕ್ತಿ ಪಥ ಮತ್ತು ರಾಮಪಥದಲ್ಲಿ ಅಳವಡಿಸಲಾಗಿದ್ದ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ 3,800 ಬಿದಿರು ಗಳ ಮತ್ತು 36 ಪ್ರೊಜೆಕ್ಟರ್ ಲೈಟ್‌ಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದ ಒಪ್ಪಂದದಡಿಯಲ್ಲಿ ದೀಪಗಳನ್ನು ಸ್ಥಾಪಿಸಿದ ಯಶ್ ಎಂಟರ್‌ಪ್ರೈಸಸ್ ಮತ್ತು ಕೃಷ್ಣ ಆಟೋಮೊಬೈಲ್ಸ್‌ನ ಪ್ರತಿನಿಧಿ ಆಗಸ್ಟ್ 9ರಂದು ನೀಡಿದ ದೂರಿನ ಮೇರೆಗೆ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ರಾಮಪಥದಲ್ಲಿ 6,400 ಬಿದಿರಿನ ಕಂಬದ ದೀಪಗಳು ಮತ್ತು ಭಕ್ತಿ ಪಥದಲ್ಲಿ 96 ಪ್ರೊಜೆಕ್ಟರ್ ದೀಪಗಳನ್ನು ಅಳವಡಿಸಲಾಗಿದೆ, ಮಾರ್ಚ್ 19ರವರೆಗೆ ಎಲ್ಲಾ ದೀಪಗಳು ಇದ್ದವು ಆದರೆ ಮೇ 9ರಂದು ನಡೆಸಿದ ಪರಿಶೀಲನೆಯಲ್ಲಿ ಕೆಲವು ದೀಪಗಳು ನಾಪತ್ತೆಯಾಗಿರುವುದು ಕಂಡುಬಂದಿದೆ.

ಇಲ್ಲಿಯವರೆಗೆ ಸುಮಾರು 3,800 ಬಿದಿರಿನ ದೀಪಗಳು ಮತ್ತು 36 ಪ್ರೊಜೆಕ್ಟರ್ ದೀಪಗಳನ್ನು ಯಾರೋ ಅಪರಿಚಿತ ಕಳ್ಳರು ಕದ್ದೊಯ್ದಿದ್ದಾರೆ ಎಂದು ಸಂಸ್ಥೆಯ ಪ್ರತಿನಿಧಿ ಶೇಖರ್ ಶರ್ಮಾ ದೂರಿನಲ್ಲಿ ತಿಳಿಸಿದ್ದಾರೆ.

ಎಫ್‌ಐಆರ್ ಪ್ರಕಾರ, ಸಂಸ್ಥೆಗೆ ಮೇ ತಿಂಗಳಲ್ಲಿಯೇ ಕಳ್ಳತನದ ಬಗ್ಗೆ ತಿಳಿದಿತ್ತು ಆದರೆ ಅದು ಆಗಸ್ಟ್ 9ರಂದು ದೂರು ದಾಖಲಿಸಿದೆ.

ಈ ಸಂಬಂಧ ಎಫ್‌ಐಆರ್‌ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜನವರಿ 22ರಂದು ಪವಿತ್ರ ನಗರದಲ್ಲಿ ರಾಮಮಂದಿರದ ಪ್ರತಿಷ್ಠಾಪನೆ ಸಮಾರಂಭಕ್ಕೂ ಮೊದಲು ಅಯೋಧ್ಯೆಯನ್ನು ಪ್ರಮುಖ ಯೋಜನೆಯಡಿ ನವೀಕರಿಸಲಾಗಿತ್ತು.

You cannot copy content of this page

Exit mobile version