Monday, September 22, 2025

ಸತ್ಯ | ನ್ಯಾಯ |ಧರ್ಮ

ಸಾಹಿತಿ ಬಾನು ಮುಷ್ತಾಕ್ ರಿಂದ ನಾಡ ಹಬ್ಬ ಮೈಸೂರು ದಸರಾಗೆ ಚಾಲನೆ

ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಾಹಿತಿ, ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ನಾಡಹಬ್ಬ ಮೈಸೂರು ದಸರಾಗೆ ಚಾಲನೆ ನೀಡಿದ್ದಾರೆ. ಬಾನು ಮುಷ್ತಾಕ್ ಅವರು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ದಸರಾಗೆ ಅರಮನೆ ನಗರಿ ಮೈಸೂರು ನವವಧುವಿನಂತೆ ಸಿಂಗಾರಗೊಂಡು ನಿಂತಿದೆ. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಬೀದಿಗಳು, ಕಲೆ, ಸಾಹಿತ್ಯ, ಸಂಸ್ಕೃತಿಗಳನ್ನು ನೋಡುಗರಿಗೆ ಉಣಬಡಿಸಲು ಎದುರುನೋಡುತ್ತಿರುವ ವೇದಿಕೆಗಳು, ತಳಿರು ತೋರಣಗಳಿಂದ ಸಿಂಗಾರಗೊಂಡ ಮೈಸೂರು ಅರಮನೆ ಹೀಗೆ ಇಡೀ ನಗರವೇ ಹೊಸರೂಪ ಪಡೆದು ಕಂಗೊಳಿಸುತ್ತಿದೆ.

ಅಂಬಾರಿ ಮೆರವಣಿಗೆಗೆ ಈಗಾಗಲೇ ಭರ್ಜರಿ ತಯಾರಿ ನಡೆದಿದೆ. ತಿಂಗಳ ಹಿಂದೆಯೇ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಗಜಪಡೆ ನಿತ್ಯದ ತಾಲೀಮ ಮುಗಿಸಿ, ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿ ಹೊತ್ತು ಸಾಗಲು ಸರ್ವಸನ್ನದ್ಧಗೊಂಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page