Wednesday, July 30, 2025

ಸತ್ಯ | ನ್ಯಾಯ |ಧರ್ಮ

ಎಲ್.ಕೆ.ಅಡ್ವಾಣಿ ಆಸ್ಪತ್ರೆಗೆ ದಾಖಲು

ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬುಧವಾರ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಧ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 96 ವರ್ಷದ ಅವರನ್ನು ದೆಹಲಿಯ ಏಮ್ಸ್‌ಗೆ ಕರೆದೊಯ್ಯಲಾಗಿದೆ.

LK ಅಡ್ವಾಣಿ ಅವರು ಜೂನ್ 2002 ರಿಂದ ಮೇ 2004 ರವರೆಗೆ ಭಾರತದ ಉಪ ಪ್ರಧಾನ ಮಂತ್ರಿಯಾಗಿ ಮತ್ತು ಅಕ್ಟೋಬರ್ 1999 ರಿಂದ ಮೇ 2004 ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು. ಅವರು 1986 ರಿಂದ 1990, 1993 ರಿಂದ 1998 ಮತ್ತು 2004 ರಿಂದ 2005 ರವರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು.

ಏಮ್ಸ್ ಆಸ್ಪತ್ರೆಯಲ್ಲಿ ವೃದ್ಧಾಪ್ಯ ವಿಭಾಗದ ತಜ್ಞರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿರಿಯ ನಾಯಕ ಅಡ್ವಾಣಿಯವರು ಹಲವು ದಿನಗಳಿಂದ ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಪರಿಸ್ಥಿತಿಗಳಿಂದ ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page