Home ದೇಶ ಎಲ್ ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಎಲ್ ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

0

ದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರ ಆರೋಗ್ಯ ಹದಗೆಟ್ಟಿದೆ. ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಪೋಲೋ ಮೂಲಗಳು ತಿಳಿಸಿವೆ.

ಶೀಘ್ರದಲ್ಲೇ ಮೆಡಿಕಲ್ ಬುಲೆಟಿನ್ ಬಿಡುಗಡೆಯಾಗಲಿದೆ. 97 ವರ್ಷದ ಅಡ್ವಾಣಿ ಅವರು ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕಳೆದ 4-5 ತಿಂಗಳ ಅವಧಿಯಲ್ಲಿ ನಾಲ್ಕನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಮೊನ್ನೆ ಆಗಸ್ಟ್ ತಿಂಗಳಿನಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜುಲೈ 3ರಂದು ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಕ್ಕೂ ಮೊದಲು ಜೂನ್ 26ರಂದು ಅವರು ದೆಹಲಿಯ ಏಮ್ಸ್‌ಗೆ ಸೇರಿದ್ದರು. ಅವರನ್ನು ನರವಿಜ್ಞಾನ ವಿಭಾಗದಲ್ಲಿ ನಿಗಾ ಇರಿಸಲಾಗಿತ್ತು. ಮರುದಿನ ಅವರಿಗೆ ಒಂದು ಸಣ್ಣ ಶಸ್ತ್ರಚಿಕಿತ್ಸೆ ಮಾಡಲಾಯಿತು. ಸ್ವಲ್ಪ ಸಮಯದ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಯಿತು.

ಎಲ್ ಕೆ ಅಡ್ವಾಣಿ ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇಷ್ಟು ದಿನ ತಮ್ಮ ಮನೆಯಲ್ಲೇ ಉಳಿದುಕೊಂಡಿದ್ದ ಅವರು ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸದೇ ಇರುವುದಕ್ಕೆ ಇದೇ ಕಾರಣ ಎನ್ನಲಾಗಿದೆ.

You cannot copy content of this page

Exit mobile version