ಬೆಂಗಳೂರು: ರಾಜ್ಯದಲ್ಲಿ (State) ಅಂಗನವಾಡಿ (Anganavadi) ಕೊಠಡಿಗಳಲ್ಲಿ ಎಲ್‌ಕೆಜಿ, ಯುಕೆಜಿ (Lkg̲Ukg) ತರಗತಿಗಳನ್ನ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalakal) ಹೇಳಿದ್ದಾರೆ.

4 – 5 ಸಾವಿರ ಅಂಗನವಾಡಿಗಳಲ್ಲಿ ತರಬೇತಿ ಆರಂಭ
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ ಮಾಡಲು 2 ಕೊಠಡಿಗಳ ಅಗತ್ಯವಿದೆ. ರಾಜ್ಯದಲ್ಲಿ ಈ ರೀತಿ 2 ಕೊಠಡಿಗಳಿರುವ 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಗುರುತಿಸಿ ಪಟ್ಟಿ ಮಾಡಲಾಗಿದೆ. ಸದ್ಯ 4 – 5 ಸಾವಿರ ಅಂಗನವಾಡಿಗಳಲ್ಲಿ ತರಗತಿಗಳನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲ ಕೇಂದ್ರಗಳಲ್ಲಿ ಆರಂಭ ಮಾಡಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಚಾಮರಾಜನಗರದಲ್ಲಿ 233 ಕೇಂದ್ರ
ಇನ್ನು ಚಾಮರಾಜನಗರ ಜಿಲ್ಲೆಯಲ್ಲಿ 233 ಅಂಗನವಾಡಿ ಕೇಂದ್ರಗಳನ್ನ ಇಲಾಖೆ ಪಟ್ಟಿ ಮಾಡಿದ್ದು, ಈ ಕೇಂದ್ರಗಳಲ್ಲಿ ಅಂಗನವಾಡಿ ಇಲಾಖೆ ಆರಂಭಿಸಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರತ್ಯೇಕ ಇಲಾಖೆಯಾಗಿ ರೂಪುಗೊಂಡು ಅಕ್ಟೋಬರ್ 2 ಕ್ಕೆ 50 ವರ್ಷಗಳನ್ನ ಪೂರೈಸುತ್ತದೆ. ಈ ನಿಟ್ಟಿನಲ್ಲಿ ಅಕ್ಟೋಬರ್‌ನಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ಆರಂಭಿಸಲು ಇಲಾಖೆ ನಿರ್ಧಾರ ಮಾಡಿದೆ. ಹಾಗೆಯೇ, ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರಿಗೆ ಈಗಾಗಲೇ ತರಬೇತಿ ನೀಡಿದ್ದು, ಪುಸ್ತಕಗಳನ್ನ ಸಹ ಕೊಡಲಾಗಿದೆ.