Friday, September 12, 2025

ಸತ್ಯ | ನ್ಯಾಯ |ಧರ್ಮ

2 ತಿಂಗಳೊಳಗೆ ಅಂಗನವಾಡಿಯಲ್ಲಿ ಎಲ್‌ಕೆಜಿ-ಯುಕೆಜಿ ಆರಂಭ – ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರು: ರಾಜ್ಯದಲ್ಲಿ (State) ಅಂಗನವಾಡಿ (Anganavadi) ಕೊಠಡಿಗಳಲ್ಲಿ ಎಲ್‌ಕೆಜಿ, ಯುಕೆಜಿ (Lkg̲Ukg)  ತರಗತಿಗಳನ್ನ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalakal) ಹೇಳಿದ್ದಾರೆ.

4 – 5 ಸಾವಿರ ಅಂಗನವಾಡಿಗಳಲ್ಲಿ ತರಬೇತಿ ಆರಂಭ
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ ಮಾಡಲು 2 ಕೊಠಡಿಗಳ ಅಗತ್ಯವಿದೆ. ರಾಜ್ಯದಲ್ಲಿ ಈ ರೀತಿ 2  ಕೊಠಡಿಗಳಿರುವ 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಗುರುತಿಸಿ ಪಟ್ಟಿ ಮಾಡಲಾಗಿದೆ. ಸದ್ಯ 4 – 5 ಸಾವಿರ ಅಂಗನವಾಡಿಗಳಲ್ಲಿ ತರಗತಿಗಳನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲ ಕೇಂದ್ರಗಳಲ್ಲಿ ಆರಂಭ ಮಾಡಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಚಾಮರಾಜನಗರದಲ್ಲಿ 233 ಕೇಂದ್ರ
ಇನ್ನು ಚಾಮರಾಜನಗರ ಜಿಲ್ಲೆಯಲ್ಲಿ 233 ಅಂಗನವಾಡಿ ಕೇಂದ್ರಗಳನ್ನ ಇಲಾಖೆ ಪಟ್ಟಿ ಮಾಡಿದ್ದು, ಈ ಕೇಂದ್ರಗಳಲ್ಲಿ ಅಂಗನವಾಡಿ ಇಲಾಖೆ ಆರಂಭಿಸಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರತ್ಯೇಕ ಇಲಾಖೆಯಾಗಿ ರೂಪುಗೊಂಡು ಅಕ್ಟೋಬರ್‌ 2 ಕ್ಕೆ 50 ವರ್ಷಗಳನ್ನ ಪೂರೈಸುತ್ತದೆ. ಈ ನಿಟ್ಟಿನಲ್ಲಿ ಅಕ್ಟೋಬರ್‌ನಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ ಕೆಜಿ ಮತ್ತು ಯುಕೆಜಿ ಆರಂಭಿಸಲು ಇಲಾಖೆ ನಿರ್ಧಾರ ಮಾಡಿದೆ. ಹಾಗೆಯೇ, ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರಿಗೆ ಈಗಾಗಲೇ ತರಬೇತಿ ನೀಡಿದ್ದು, ಪುಸ್ತಕಗಳನ್ನ ಸಹ ಕೊಡಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page