Friday, August 23, 2024

ಸತ್ಯ | ನ್ಯಾಯ |ಧರ್ಮ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಆಗಸ್ಟ್.22 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿ ಬರುವ ಕರ್ನಾಟಕ ಉಪ್ಪಾರ ಅಭಿವೃಧ್ಧಿ ನಿಗಮದಿಂದ 2024-25ನೇ ಸಾಲಿನ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ, ನೇರ ಸಾಲ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕ್‍ಗಳ ಸಹಯೋಗದೊಂದಿಗೆ), ಅರಿವು ಶೈಕ್ಷಣಿಕ ಸಾಲ ಯೋಜನೆ(ನೂತನ), ಅರಿವು ಶೈಕ್ಷಣಿಕಸಾಲ(ನವೀಕರಣ), ವಿದೇಶಿ ವ್ಯಾಸಂಗ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರರು ಸೂಕ್ತ ದಾಖಲೆಗಳೊಂದಿಗೆ ಸೇವಾ ಸಿಂಧು ಪೋರ್ಟಲ್, ಗ್ರಾಮ ಒನ್, ಕರ್ನಾಟಕ ಒನ್, ಹು-ಧಾ-ಒನ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 16, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0836-2957829 ಗೆ ಅಥವಾ ನಿಗಮದ ವೆಬ್‍ಸೈಟ್ http://upparadevelopment.karnataka.gov.in ಗೆ ಭೇಟಿ ನೀಡಬಹುದು ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page