Wednesday, September 10, 2025

ಸತ್ಯ | ನ್ಯಾಯ |ಧರ್ಮ

ಲೋಕಸಭಾ ಚುನಾವಣೆ : ದಿನಾಂಕ ಪ್ರಕಟ, ಕರ್ನಾಟಕದಲ್ಲಿ ಯಾವಾಗ? ಇಲ್ಲಿದೆ ವಿವರ

ಲೋಕಸಭಾ ಚುನಾವಣೆಯ (Lok Sabha Elections) ದಿನಾಂಕವನ್ನು ಚುನಾವಣಾ ಆಯೋಗ ಇಂದು ತಿಳಿಸಿದ್ದು, ಒಟ್ಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಜೂನ್ 4 ರಂದು ಚುನಾವಣಾ ಫಲಿತಾಂಶವನ್ನು ಪ್ರಕಟ ಮಾಡಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಬರೋಬ್ಬರಿ 21 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಎರಡನೇ ಹಂತಕ್ಕೆ ಏಪ್ರಿಲ್ 26 ರಂದು, ಮೂರನೇ ಹಂತಕ್ಕೆ ಮೇ 7ರಂದು, ನಾಲ್ಕನೇ ಹಂತ ಮೇ 13, ಐದನೇ ಹಂತ ಮೇ 20, ಆರನೇ ಹಂತ ಮೇ 26 ಹಾಗೂ 7 ನೇ ಹಂತದಲ್ಲಿ ಜೂನ್ 1 ಕ್ಕೆ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

ಒಟ್ಟು 7 ಹಂತಗಳಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಹಾಗೆಯೇ ಜೂನ್ 4 ರಂದು ಚುನಾವಣೆ ಫಲಿತಾಂಶ ಘೋಷಣೆ ಆಗಲಿದೆ. ಚುನಾವಣಾ ನೀತಿ ಸಂಹಿತೆ (Model Code of Conduct) ಇಂದಿನಿಂದಲೇ ಜಾರಿಯಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

ಇದರ ಜೊತೆಗೆ ಕರ್ನಾಟಕದಲ್ಲಿ ಸುರಪುರ ಕಾಂಗ್ರೆಸ್ ಶಾಸಕರ ನಿಧನದಿಂದ ತೆರವಾದ ಸ್ಥಾನಕ್ಕೂ ಮತದಾನ ನಡೆಯಲಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page