Friday, June 14, 2024

ಸತ್ಯ | ನ್ಯಾಯ |ಧರ್ಮ

ಲೋಕಸಭಾ ಚುನಾವಣೆ : ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭ

ಲೋಕಸಭಾ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಚುನಾವಣಾ ಆಯೋಗದಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಆ ದಿಸೆಯಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಆ ಮೂಲಕ ಮೊದಲ ಹಂತದ ಚುನಾವಣೆ ಹಿನ್ನೆಲೆಯಲ್ಲಿ ಇಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ.

ನಾಮಪತ್ರ ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನವಾಗಿದೆ. ಏಪ್ರಿಲ್, 05 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್, 08 ರಂದು ನಾಮಪತ್ರ ವಾಪಸ್ಸು ಪಡೆಯಲು ಕಡೆಯ ದಿನವಾಗಿದೆ. ಏಪ್ರಿಲ್, 26 ರಂದು ಮತದಾನ ನಡೆಯಲಿದ್ದು, ಜೂನ್, 04 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆಯಲಿದೆ.

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಖಾತರಿಪಡಿಸಿಕೊಳ್ಳುವುದು, ಮತಗಟ್ಟೆ ಬಗ್ಗೆ ಮಾಹಿತಿ ಪಡೆಯುವುದು ಇತರೆ ಚುನಾವಣೆ ವಿಷಯಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು/ ಮಾಹಿತಿಯನ್ನು ಪಡೆಯಲು ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಟೋಲ್ ಫ್ರೀ ಸಂಖ್ಯೆ 1950 ಕ್ಕೆ ಕರೆ ಮಾಡಬಹುದಾಗಿದೆ. ಹಾಗೆಯೇ ವೋಟರ್ ಸಹಾಯವಾಣಿ 24*7 ಕಾರ್ಯನಿರ್ವಹಿಸಲಾಗುತ್ತದೆ.

ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಹಾಗೂ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ನಿಗಾ ಇಡಲು ಸೆಕ್ಟರ್ ಅಧಿಕಾರಿಗಳು ಪ್ರೈಯಿಂಗ್ ಸ್ಕ್ವಾಡ್, ಲೆಕ್ಕ ವೀಕ್ಷಕರ ತಂಡ, ವಿಡಿಯೋ ವಿವಿಂಗ್ ತಂಡ, ವಿಡಿಯೋ ಪರಿಶೀಲನಾ ತಂಡ, ಸಹಾಯಕ ವೆಚ್ಚ ವೀಕ್ಷಕರ ತಂಡಗಳನ್ನು ರಚಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು