Friday, April 26, 2024

ಸತ್ಯ | ನ್ಯಾಯ |ಧರ್ಮ

ಲೋಕಸಭಾ ಚುನಾವಣೆ: 2ನೇ ಹಂತದಲ್ಲಿ 1,210 ಅಭ್ಯರ್ಥಿಗಳ ನಾಮಪತ್ರ ಸ್ವೀಕೃತ

ನವದೆಹಲಿ: ಏಪ್ರಿಲ್ 26ರಂದು ಮತದಾನ ನಡೆಯಲಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಒಟ್ಟು 1,210 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಚುನಾವಣಾ ಆಯೋಗ ಮಂಗಳವಾರ ಪ್ರಕಟಣೆ ಹೊರಡಿಸಿದೆ.

12 ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು 2,633 ನಾಮಪತ್ರಗಳು 2ನೇ ಹಂತದಲ್ಲಿ ಸಲ್ಲಿಕೆಯಾಗಿದ್ದವು. ನಾಮಪತ್ರ ಹಿಂಪಡೆಯಲು ಸೋಮವಾರ ಕೊನೆಯ ದಿನವಾಗಿತ್ತು.  ಸೂಕ್ಷ್ಮ ಪರಿಶೀಲನೆಯ ಬಳಿಕ 1,428 ನಾಮಪತ್ರಗಳು ಸ್ವೀಕೃತವಾಗಿವೆ. ಕೊನೆಯ ಕ್ಷಣದಲ್ಲಿ ಕೆಲವು ಅಭ್ಯರ್ಥಿಗಳು ನಾಮಪತ್ರ ಹಿಂಪಡೆದ ಕಾರಣ 1,210 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ.  

ಎರಡನೇ ಹಂತದಲ್ಲಿ ಕೇರಳದ ವಯನಾಡ್ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಲ್‌ಡಿಎಫ್‌ನ ಆನಿ ರಾಜಾ ಮತ್ತು ಬಿಜೆಪಿಯ ಕೆ.ಸುರೇಂದ್ರನ್ ನಡುವೆ ನಿಕಟ ಪೈಪೋಟಿ ಏರ್ಪಡುವ ನಿರೀಕ್ಷೆಯಿದೆ. ಹಾಗೆಯೇ ತಿರುವನಂತಪುರದಲ್ಲಿ ಕಾಂಗ್ರೆಸ್‌ನ ಶಶಿ ತರೂರ್, ಬಿಜೆಪಿಯ ಶಶಿ ತರೂರ್ ಮತ್ತು ಎಲ್‌ಡಿಎಫ್‌ನ ಪಣ್ಯನ್ ರವೀಂದ್ರನ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

20 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಕೇರಳದಲ್ಲಿ 500 ನಾಮಪತ್ರಗಳು ಸಲ್ಲಿಕೆಯಾಗಿವೆ. ಹಾಗೆಯೇ ತ್ರಿಪುರಾದ ಒಂದು ಕ್ಷೇತ್ರಕ್ಕೆ ಕನಿಷ್ಠ 14 ಮತ್ತು ಮಹಾರಾಷ್ಟ್ರದ ನಾಂದೇಡ್ ಕ್ಷೇತ್ರಕ್ಕೆ ಗರಿಷ್ಠ 92 ನಾಮಪತ್ರಗಳು ಸಲ್ಲಿಕೆಯಾಗಿವೆ. ಬಹುತೇಕ ಕಡೆ ಕಾಂಗ್ರೆಸ್‌ ಮತ್ತು ಬಿಜೆಪಿ; ಈ ಎರಡೇ ಪಕ್ಷಗಳು ತೀವ್ರ ಪೈಪೋಟಿಯನ್ನು ಎದುರಿಸಲಿವೆ.

Related Articles

ಇತ್ತೀಚಿನ ಸುದ್ದಿಗಳು