Home ಬ್ರೇಕಿಂಗ್ ಸುದ್ದಿ 9 ಅಧಿಕಾರಿಗಳಿಗೆ ಸಂಬಂಧಿಸಿದ 40 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ; ಅಪಾರ ಪ್ರಮಾಣದ ದಾಖಲೆ ವಶ

9 ಅಧಿಕಾರಿಗಳಿಗೆ ಸಂಬಂಧಿಸಿದ 40 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ; ಅಪಾರ ಪ್ರಮಾಣದ ದಾಖಲೆ ವಶ

0

ಬೆಳಗಾವಿ, ಹಾವೇರಿ, ದಾವಣಗೆರೆ, ಕಲಬುರ್ಗಿ, ರಾಮನಗರ, ಮೈಸೂರು, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ವಿವಿಧ ಇಲಾಖೆಗಳ 9 ಅಧಿಕಾರಿಗಳ ಮನೆ, ಕಛೇರಿ ಮತ್ತು ಸಂಬಂಧಿತ ಮನೆಗಳ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆಯ ಆರೋಪಕ್ಕೆ ಸಂಬಂಧಿಸಿದಂತೆ 9 ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಛೇರಿಗಳಿಗೆ ಇಂದು ಬೆಳಿಗ್ಗೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು.

ಪಂಚಾಯತ್ ಇಂಜಿನಿಯರಿಂಗ್ ಸಹಾಯಕ ಇಂಜಿನಿಯರ್ ಕಾಶಿನಾಥ್ ಭಜಂತ್ರಿ ಲಕ್ಷ ಲಕ್ಷ ಹಣವನ್ನು ತನ್ನ ಬೆಡ್ ರೂಂ ನಲ್ಲಿ ಹಾಸಿಗೆ ಕೆಳಗೆ ಬಚ್ಚಿಟ್ಟಿದ್ದಾ ಹಣವನ್ನು ಗಂಟು ಕಟ್ಟಿ ಮನೆಯಿಂದ ಹೊರಗೆ ಎಸೆದಿದ್ದು, ಅದನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.

ಕೆಲವು ಅಧಿಕಾರಿಗಳು ಖಾಸಗಿ ಕಚೇರಿ, ರಿಯಲ್ ಎಸ್ಟೇಟ್ ಏಜೆನ್ಸಿ ನಡೆಸುತ್ತಿರುವುದು ದಾಳಿ ವೇಳೆ ಪತ್ತೆಯಾಗಿದೆ. ಅಪಾರ್ಟ್‌ಮೆಂಟ್‌ಗಳು ಮತ್ತು ಬಡವಾವಣೆಗಳ ನಿರ್ಮಾಣದ ಬಗ್ಗೆಯೂ ದಾಖಲೆಗಳು ಪತ್ತೆಯಾಗಿವೆ.

You cannot copy content of this page

Exit mobile version