Home ಅಪರಾಧ ರಾಜ್ಯದ ವಿವಿಧ ಕಡೆ ಏಕಕಾಲಕ್ಕೆ ಲೋಕಾಯುಕ್ತ ರೇಡ್  

ರಾಜ್ಯದ ವಿವಿಧ ಕಡೆ ಏಕಕಾಲಕ್ಕೆ ಲೋಕಾಯುಕ್ತ ರೇಡ್  

0

ಕೊಪ್ಪಳ : ರಾಜ್ಯದ ಭ್ರಷ್ಟಕುಳಗಳಿಗೆ ( corruption ) ಲೋಕಾಯುಕ್ತ (lokayukta ) ಶಾಕ್ (shock) ನೀಡಿದ್ದಾರೆ. ಕೊಪ್ಪಳ ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ರಾಜ್ಯದ ವಿವಿಧ ಕಡೆ ಏಕಕಾಲಕ್ಕೆ ಲೋಕಾಯುಕ್ತ ರೇಡ್ ಮಾಡಿದ್ದು, ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ರೇಡ್ ಮಾಡಿ ತಲಾಶ್ ನಡೆಸುತ್ತಿದ್ದಾರೆ.

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಕೊಪ್ಪಳ ನಗರದ 5 ಕಡೆ ಸೇರಿ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೊಪ್ಪಳ ನಗರಸಭೆ ಕಚೇರಿ ಸಿಬ್ಬಂದಿ ಹಾಗೂ ಗುತ್ತಿಗೆದಾರರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ ಎಂದು ಸ್ಪಷ್ಟವಾಗಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.

ಕೊಪ್ಪಳ ನಗರಸಭೆ ಅಧ್ಯಕ್ಷ ಅಹಮದ್‌ ಪಟೇಲ್‌ ಮನೆ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಅಕ್ರಮ ಆಸ್ತಿ ಸಂಪಾದಿಸಿದ ಆರೋಪದ ಮೇರೆಗೆ ಈ ದಾಳಿ ನಡೆದಿದೆ. ಈಗಾಗಲೇ ಹಲವು ಫೈಲ್ ಹಾಗೂ ಹಣಕಾಸು ವ್ಯವಹಾರಕ್ಕೆ ಸಂಬಂಧ ಪಟ್ಟಂತೆ ದಾಖಲೆ ವಶಕ್ಕೆ ಪಡೆಯಲಾಗಿದೆ.

ಇನ್ನು,ಪೋಕ್ಸೋ ಕೇಸ್  ವೊಂದರ ದೋಷರೋಪ ಪಟ್ಟಿ ಸಲ್ಲಿಸಲು 75 ಸಾವಿರ ರೂ. ಲಂಚದ ಬೇಡಿಕೆಯಿಟ್ಟಿದ್ದ ಬೆಂಗಳೂರಿನ ದೇವನಹಳ್ಳಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಪೋಕ್ಸೋ ಪ್ರಕರಣ ವೊಂದರಲ್ಲಿ ಚಾರ್ಚ್ ಶೀಟ್ ಸಲ್ಲಿಸಿ ನ್ಯಾಯಾಲಯಕ್ಕೆ ಒಪ್ಪಿಸಲು ದೇವನಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಜಗದೇವಿ, ಕಾನ್ಸ್‌ಟೇಬಲ್‌ಗಳಾದ ಮಂಜುನಾಥ್  ಸುಮಾರು 70 ಸಾವಿರ ರೂಪಾಯಿ ನೀಡುವಂತೆ ಬೇಡಿಕೆಯಿಟ್ಟಿದ್ದರು.

ಅಲ್ಲದೇ ಹಣ ನೀಡದಿದ್ದರೆ ಪ್ರಕರಣ ದಾಖಲಿಸುವುದಿಲ್ಲ ಎಂದು ಹೇಳಿದ್ದರು, ಇದರಿಂದ ಮನನೊಂದ ಮಹಿಳೆ ಹಣವನ್ನು ಒಟ್ಟು ಮಾಡಿ ತರುತ್ತೇನೆ ಎಂದು ಹೇಳಿ ಹೊರಬಂದಿದ್ದಾರೆ. ಬಳಿಕ ದೂರು ಸ್ವೀಕರಿಸಲು ಲಂಚದ ಬೇಡಿಕೆಯಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಇದಾಗಿ ಒಂದೆರಡು ದಿನದ ಬಳಿಕ ಮಹಿಳೆ ದೂರು ನೀಡಲು ಬಂದಿದ್ದಾರೆ, ಈ ವೇಳೆ ಮೊದಲು ಹಣ ನೀಡಲು ತಿಳಿಸಿದ್ದಾರೆ., ಅದರಂತೆ ಬೇಡಿಕೆಯಿಟ್ಟ 75 ಸಾವಿರ ಪೈಕಿ 50 ಸಾವಿರ ರೂಪಾಯಿ ಸ್ವೀಕರಿಸುವಾಗ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಾನ್ಸ್‌ಟೇಬಲ್‌ ಅಂಬರೀಷ್ ಎಂಬಾತ ಲಂಚವನ್ನು ಸ್ವೀಕರಿಸುತ್ತಿದ್ದಂತೆ ಲೋಕಾ ಅಧಿಕಾರಿಗಳು ದಾಳಿ ನಡೆಸಿ ಕಾನ್ಸ್‌ಟೇಬಲ್‌ ನನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಈ ಬಗ್ಗೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತ ಲೋಕಾ ಪೊಲೀಸರ ದಾಳಿ ಸುದ್ದಿ ಹಾಗೂ ಪ್ರಕರಣ ದಾಖಲಾಗಿರುವ ಸುದ್ದಿ ಕೇಳುತ್ತಿದ್ದಂತೆ  ಪಿಎಸ್‌ಐ ಜಗದೇವಿ ಹಾಗೂ ಕಾನ್ಸ್‌ಟೇಬಲ್ ಮಂಜುನಾಥ್ ಪರಾರಿಯಾಗಿದ್ದಾರೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ಆರೋಪಿಗಳಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ.

You cannot copy content of this page

Exit mobile version